ಕಾಪು: ಡಿವೈಡರ್ ಮೇಲೆರಿದ ಕಾರು ಭೀಕರ ಅಪಘಾತ- ಹಲವರಿಗೆ ಗಾಯ

ಉದ್ಯಾವರ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ ಮೇಲೇರಿದ ಎಕ್ಸ್ ಯು ವಿ ಕಾರ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ಉದ್ಯಾವರ ಕಿಯಾ ಶೋರೂಮ್ ಬಳಿ ಇಂದು ಮುಂಜಾನೆ ಮಂಗಳೂರು ಕಡೆಯಿಂದ ಉಡುಪಿಯತ್ತ ಹೋಗುತ್ತಿದ್ದಾಗ ಈ ಅಪಘಾತ ನಡೆದಿದೆ.

ಕೆಲವೇ ದಿನಗಳ ಹಿಂದೆ ಖರೀದಿ ಮಾಡಿದ ಹರಿಯಾಣ ಮೂಲದವರ ಹೊಸ ಕಾರು ಅಪಘಾತದಲ್ಲಿ ಸಂಪೂರ್ಣ ನಜ್ಜುಗುಜ್ಜಾಗಿದೆ.

ಕಾರಿನಲ್ಲಿ ಇದ್ದವರಿಗೆ ತರಚಿದ ಗಾಯ, ಅಪಾಯದಿಂದ ಪಾರಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಕಾಪು ಪೊಲೀಸರು ಸ್ಥಳದಲ್ಲಿದ್ದು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!