ಕಾಂಗ್ರೆಸ್ ಹಿಂದುಳಿದ ವರ್ಗಗಳ ರಾಜ್ಯ ಕಾರ್ಯದರ್ಶಿಯಾಗಿ ಯತೀಶ್ ಕರ್ಕೆರ ನೇಮಕ
ಉಡುಪಿ: ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾಗಿದ್ದ ಯತೀಶ್ ಕರ್ಕೆರರನ್ನು ರಾಜ್ಯ ಕಾಂಗ್ರೆಸ್ ವರಿಷ್ಠರ ನಿರ್ದೇಶನದ ಮೇರೆಗೆ ಪಕ್ಷದ ಹೆಚ್ಚಿನ ಸಂಘಟನಾ ದೃಷ್ಠಿಯಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.