ಕುಂದಾಪುರ: ವಿವಾಹಿತೆ ನಾಪತ್ತೆ- ಸೇತುವೆ ಬಳಿ ಸ್ಕೂಟಿ ಪತ್ತೆ

ಕುಂದಾಪುರ: ವಿವಾಹಿತ ಮಹಿಳೆಯೋರ್ವರು ಜೂ. 9 ರಂದು ನಾಪತ್ತೆಯಾದ ಬಗ್ಗೆ ಕುಂದಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ.

ನಾಪತ್ತೆಯಾದ ಮಹಿಳೆ ಕುಂದಾಪುರ ವಿಠಲವಾಡಿ ಮೂಲದ ಹೀನಾ ಕೌಷರ್ (33) ಎಂದು ತಿಳಿದು ಬಂದಿದೆ. ಇವರ ಪತಿ ವಿದೇಶದಲ್ಲಿದ್ದು ಎರಡು ಮಕ್ಕಳು ಹಾಗೂ ತಾಯಿಯೊಂದಿಗೆ ಕುಂದಾಪುರ ವಿಠಲವಾಡಿಯಲ್ಲಿ ವಾಸಿಸುತ್ತಿದ್ದರು.

ಸೋಮವಾರ ಬೆಳಿಗ್ಗೆ 4 ಗಂಟೆ ಸುಮಾರಿಗೆ ಕುಂದಾಪುರ ಚರ್ಚ್ ರೋಡ್ ಯಿಂದ ಕೋಡಿಗೆ ಹೋಗುವ ಸೇತುವೆ ಬಳಿ ಈಕೆಯ ಸ್ಕೂಟರ್ ಹಾಗೂ ಚಪ್ಪಲಿ ಪತ್ತೆ ಯಾಗಿದೆ.

ಪೊಲೀಸರು, ಅಗ್ನಿ ಶಾಮಕದಳ ಹಾಗೂ ಸ್ಥಳೀಯರು ಸೇರಿ ನದಿಯಲ್ಲಿ ಹುಡುಕಾಟ ನಡೆಸಿದ್ದು ಎಲ್ಲಿಯೂ ಪತ್ತೆ ಆಗಿರುವುದಿಲ್ಲ. ಮೊಬೈಲ್ ಸ್ವಿಚ್ ಆಫ್ ಆಗಿರುತ್ತದೆ.ಇದರಿಂದಾಗಿ ಆತ್ಮಹತ್ಯೆಯೋ ಅಥವಾ ನಾಪತ್ತೆ ಯೋ ಎನ್ನುವ ಅನುಮಾನ ವ್ಯಕ್ತವಾಗಿದೆ.ಕುಂದಾಪುರ ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!