ಮೆಸ್ಕಾಂನ ಮಣಿಪಾಲ ವಿಭಾಗದ ಕಟ್ಟಡಕ್ಕೆ ಉಡುಪಿ ಶಾಸಕರಿಂದ ಚಾಲನೆ
ಉಡುಪಿ (ಉಡುಪಿ ಟೈಮ್ಸ್ ವರದಿ): ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ ಮಣಿಪಾಲ ಉಪವಿಭಾಗದ ನೂತನ ಕಟ್ಟಡ ಇಂದು ಉದ್ಘಾಟನೆ ಗೊಂಡಿತು.
ಮಣಿಪಾಲದ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಿಸಲಾದ ಮೆಸ್ಕಾಂನ ಮಣಿಪಾಲ ಉಪವಿಭಾಗದ ನೂತನ ಕಟ್ಟಡವನ್ನು ಉಡುಪಿ ಶಾಸಕ ಕೆ. ರಘುಪತಿ ಭಟ್ ಅವರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ್ ಬಾಬು, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಸ್ಥಳೀಯ ನಗರಸಭಾ ಸದಸ್ಯೆ ಕಲ್ಪನಾ ಸುಧಾಮ, ಮೆಸ್ಕಾಂ ಅಧೀಕ್ಷಕ ಅಭಿಯಂತರ ನರಸಿಂಹ ಪಂಡಿತ್, ಕಾರ್ಯಪಾಲಕ ಅಭಿಯಂತರ ದಿನೇಶ್ ಉಪಾಧ್ಯಾಯ, ಸಹಾಯಕ ಕಾರ್ಯಪಾಲಕ ಅಭಿಯಂತರ ಪ್ರಶಾಂತ್ ಪುತ್ರನ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.