ಏರ್ ಇಂಡಿಯಾ ವಿಮಾನ ಅಪಘಾತ: ಬದುಕುಳಿದ ಓರ್ವ ಪ್ರಯಾಣಿಕ!
ಅಹ್ಮದಾಬಾದ್: ಗುಜರಾತ್ ನ ಅಹ್ಮದಾಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಒಬ್ಬ ಪ್ರಯಾಣಿಕ ಬದುಕುಳಿದಿದ್ದಾರೆ ಎಂದು ಅಹಮದಾಬಾದ್ ಪೊಲೀಸ್ ಆಯುಕ್ತ ಜಿ.ಎಸ್. ಮಲಿಕ್ ಹೇಳಿದ್ದಾರೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ರಮೇಶ್ ವಿಶ್ವಾಸ್ ಕುಮಾರ್ ಬುಚರ್ವಾಡಾ ಬದುಕುಳಿದ ಪ್ರಯಾಣಿಕ ಎಂದು ತಿಳಿದು ಬಂದಿದೆ. ಅವರು 11A ಸೀಟಿನಲ್ಲಿ ಕುಳಿತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ರಮೇಶ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಅಹ್ಮದಾಬಾದ್ ನಿಂದ ಲಂಡನ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು.
169 ಭಾರತೀಯರು, ಇಂಗ್ಲೆಂಡ್ 53 ಮಂದಿ, 7 ಮಂದಿ ಪೋರ್ಚುಗಲ್, ಓರ್ವ ಕೆನಡಾ ಪ್ರಜೆ ಸಹಿತ ಒಟ್ಟು 241 ಪ್ರಯಾಣಿಕರು ಮೃತಪಟ್ಟಿದ್ದಾರೆ,
ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ಬಿಜೆ ವೈದ್ಯಕೀಯ ಕಾಲೇಜಿನ ಹಾಸ್ಟೆಲ್‌ಗೆ ಏರ್ ಇಂಡಿಯಾ ವಿಮಾನ ಪತನಗೊಂಡ ಪರಿಣಾಮ ಮೂವರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದರು. ಅನೇಕರು ಗಾಯಗೊಂಡರು. ಇದರಲ್ಲಿ ಇಬ್ಬರು ಪದವಿಪೂರ್ವ ವಿದ್ಯಾರ್ಥಿಗಳು ಮತ್ತು ಒಬ್ಬ ಸ್ನಾತಕೋತ್ತರ ವಿದ್ಯಾರ್ಥಿ ಸೇರಿದ್ದಾರೆ.





