ಹೆಲಿಕಾಪ್ಟರ್ ಪತನ: ಪೈಲಟ್ ಸೇರಿ 6 ಮಂದಿ ದುರ್ಮರಣ,ಓರ್ವ ಗಂಭೀರ
ಉತ್ತರಾಖಂಡ: ಡೆಹ್ರಾಡೂನ್ ನಿಂದ ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ವೊಂದು ಗೌರಿಕುಂಡದ ಬಳಿ ಪತನಗೊಂಡದ್ದು, ದುರ್ಘಟನೆಯಲ್ಲಿ ಪೈಲಟ್ ಸೇರಿ 6 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ಗೌರಿಕುಂಡ್ ಬಳಿ ಇಂದು ಬೆಳಗಿನ ಜಾವ 5.30ರ ಸುಮಾರಿಗೆ ಹೆಲಿಕಾಪ್ಟರ್ ಪತವಾಗಿದೆ ಎನ್ನಲಾಗಿದ್ದು, ಹವಾಮಾನ ವೈಪರೀತ್ಯದಿಂದಾಗಿ ದುರ್ಘಟನೆ ಸಂಭವಿಸಿದೆ ಎಂದು ರಾಷ್ಟ್ರೀಯ ಮಾಧ್ಯಮ ವರದಿ ಮಾಡಿದೆ.
ಹೆಲಿಕಾಪ್ಟರ್ ನೋಡಲ್ ಅಧಿಕಾರಿ ರಾಹುಲ್ ಚೌಬೆ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ನಂದನ್ ಸಿಂಗ್ ರಾಜ್ವರ್ ಅವರು ಹೆಲಿಕಾಪ್ಟರ್ ಪತನವನ್ನು ದೃಢಪಡಿಸಿದ್ದಾರೆ.
ಘಟನೆಯಲ್ಲಿ ಪೈಲಟ್ ಸೇರಿ 6 ಮಂದಿ ಸಾವನ್ನಪ್ಪಿದ್ದು, ಓರ್ವ ಯುವತಿ ಕೂಡ ಸುಟ್ಟು ಕರಕಲಾಗಿದ್ದಾರೆಂದು ವರದಿಗಳು ತಿಳಿಸಿವೆ.
ಘಟನೆ ವೇಳೆ ಹೆಲಿಕಾಪ್ಟರ್ ನಲ್ಲಿ ಪೈಲಟ್ ಸೇರಿ ಒಟ್ಟು 7 ಮಂದಿ ಇದ್ದರು ಎನ್ನಲಾಗಿದ್ದು, ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.





