ಪುಣೆ ಸೇತುವೆ ಕುಸಿತ- ಹತ್ತು ಪ್ರವಾಸಿಗರ ಮೃತ್ಯು,15ಕ್ಕೂ ಹೆಚ್ಚು ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ?

ಪುಣೆ: ಮಹಾರಾಷ್ಟ್ರದ ಪುಣೆ ಬಳಿಯ ಇಂದ್ರಾಯಣಿ ನದಿ ಸೇತುವೆಯೊಂದು ಭಾನುವಾರ ಕುಸಿದು ಬಿದಿದ್ದು, ಆರು ಪ್ರವಾಸಿಗರು ಮೃತಪಟ್ಟಿರುವುದಾಗಿ ವರದಿಯಾಗಿದೆ.

ಪಿಂಪ್ರಿ-ಚಿಂಚ್‌ವಾಡ್ ಜಿಲ್ಲೆಯ ಮಾವಲ್ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಕುಂದಮಾಲಾ ಗ್ರಾಮದ ಬಳಿ ಈ ಘಟನೆ ನಡೆದಿದೆ. ರಮಣೀಯ ಜಲಪಾತ ಮತ್ತು ನದಿ ದಡದಿಂದ ಪ್ರತಿವರ್ಷ ನೂರಾರು ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಾರೆ. ಇಂದು ಕೂಡಾ ಹೆಚ್ಚಾಗಿ ಪ್ರವಾಸಿಗರು ಆಗಮಿಸಿದ ವೇಳೆಯಲ್ಲಿ ಈ ದುರ್ಘಟನೆ ನಡೆದಿದೆ.

5 ರಿಂದ 6 ಜನರನ್ನು ರಕ್ಷಿಸಲಾಗಿದೆ. ಇನ್ನೂ 10 ರಿಂದ 15 ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ ಇದೆ ಎಂದು ಪಿಂಪ್ರಿ-ಚಿಂಚ್‌ವಾಡ್ ಪೊಲೀಸರು ತಿಳಿಸಿದ್ದಾರೆ.

ಇದಕ್ಕಿದ್ದಂತೆ ಸೇತುವೆ ಕುಸಿದು ಬಿದ್ದಿದೆ.. ಕಳೆದ ಎರಡು ದಿನಗಳಿಂದ ಸುರಿದ ಮಳೆಯಿಂದ ತುಂಬಿ ಹರಿಯುತ್ತಿದ್ದ ನದಿಗೆ ಡಜನ್ ಮಂದಿ ಇಳಿದಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಬೃಹತ್ ರಕ್ಷಣಾ ಕಾರ್ಯಾಚರಣೆ ಆರಂಭ: ಸ್ಥಳೀಯ ಪೊಲೀಸರು, ಅಗ್ನಿಶಾಮಕ ದಳ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ರ ರಕ್ಷಣಾ ತಂಡಗಳು ತಕ್ಷಣ ಸ್ಥಳಕ್ಕೆ ಧಾವಿಸಿವೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಭಾಗವಾಗಿ ದೋಣಿಗಳು, ಡೈವರ್‌ಗಳು ಮತ್ತು ಡ್ರೋನ್‌ಗಳನ್ನು ನಿಯೋಜಿಸಲಾಗಿದೆ. ಇಲ್ಲಿಯವರೆಗೆ, ಕೆಲವು ಜನರನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ. ಆದರೆ ಇನ್ನೂ ನಾಪತ್ತೆಯಾದರ ಬಗ್ಗೆ ನಿಖರ ಮಾಹಿತಿ ತಿಳಿದುಬಂದಿಲ್ಲ

Leave a Reply

Your email address will not be published. Required fields are marked *

error: Content is protected !!