ಅಹ್ಮದ್ ಪಾಟೇಲ್ ನಿಧನಕ್ಕೆ ಉಡುಪಿ ಜಿಲ್ಲಾ ಕಾಂಗ್ರೆಸ್ ಸಂತಾಪ
ಉಡುಪಿ: ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಗ್ರಗಣ್ಯ ನಾಯಕ ಕಾಂಗ್ರೆಸ್ ಪಕ್ಷಕ್ಕೆ ತನ್ನ ಜೀವಿತಾವಧಿಯ ಬಹುತೇಕ ಕಾಲವನ್ನು ಮೀಸಲಿಟ್ಟು ಅವಿರತ ಸೇವೆಯೊಂದಿಗೆ ಪ್ರಾಮಾಣಿಕವಾಗಿ ದುಡಿದಿದ್ದ ನಿಷ್ಕಳಂಕ ಕಾಂಗ್ರೆಸ್‌ನ ನೇತಾರರಾದ ಅಹ್ಮದ್ ಪಟೇಲ್‌ರವರ ನಿಧನವು ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರುರವರು ಹಿರಿಯ ಚೇತನಕ್ಕೆ ನುಡಿ ನಮನ ಸಲ್ಲಿಸಿದರು.
ಅವರು ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್‌ನ ಸಂತಾಪ ಸಭೆಯಲ್ಲಿ ಮಾತನಾಡುತ್ತಾ ಹೇಳಿದರು. ಅಹ್ಮದ್ ಪಟೇಲರು ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಪಕ್ಷಕ್ಕಾಗಿ ಹಗಲಿರುಳು ದುಡಿಯುವುದರೊಂದಿಗೆ ಸೋನಿಯಾ ಗಾಂಧಿಯವರಿಗೆ ದೀರ್ಘಕಾಲ ರಾಜಕೀಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿ ಬಿಕ್ಕಟ್ಟಿನ ಸಂದರ್ಭದಲ್ಲಿ ಪಕ್ಷವನ್ನು ಸಂಕಷ್ಟದಿಂದ ಪಾರುಮಾಡಿದ ಅನೇಕ ಉದಾಹರಣೆಗಳು ನಮ್ಮ ಮುಂದಿದೆ ಎಂದರು.
ಸಂತಾಪ ಸಭೆಯಲ್ಲಿ ವೆರೋನಿಕಾ ಕರ್ನೇಲಿಯೋ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಭಾಸ್ಕರ್ ರಾವ್ ಕಿದಿಯೂರು, ಕುಶಲ್ ಶೆಟ್ಟಿ, ಅಣ್ಣಯ್ಯ ಶೇರಿಗಾರ್, ಜ್ಯೋತಿ ಹೆಬ್ಬಾರ್, ವೈ. ಸುಕುಮಾರ್, ಕೀರ್ತಿ ಶೆಟ್ಟಿ, ಹಬೀಬ್ ಆಲಿ, ಸತೀಶ್ ಅಮೀನ್ ಪಡುಕೆರೆ, ರೋಶನಿ ಒಲಿವರ್, ಹರೀಶ್ ಶೆಟ್ಟಿ ಪಾಂಗಾಳ, ಪೀರು ಸಾಹೇಬ್, ಉದ್ಯಾವರ ನಾಗೇಶ್ ಕುಮಾರ್, ಸೌರಭ್ ಬಲ್ಲಾಳ್, ರಮೇಶ್ ಕಾಂಚನ್, ಜನಾರ್ದನ ಭಂಡಾರ್ಕಾರ್, ಮೀನಾಕ್ಷಿ ಮಾಧವ ಬನ್ನಂಜೆ, ಅಮೃತಾ ಕೃಷ್ಣಮೂರ್ತಿ, ಸೆಲೀನ್ ಕರ್ಕಡ, ವಿಜಯ ಪೂಜಾರಿ ಬೈಲೂರು, ಯುವರಾಜ್, ಗಣೇಶ್ ನೆರ್ಗಿ, ಪ್ರಶಾಂತ್ ಪೂಜಾರಿ, ಉಪೇಂದ್ರ ಮೆಂಡನ್ ಮೊದಲಾದವರು ಉಪಸ್ಥಿತರಿದ್ದರು