ಕಾಫಿ ಬೆಳೆಗಾರರ ಸಂಕಷ್ಟ ಪರಿಹಾರಕ್ಕೆ ಶೋಭಾ ಕರಂದ್ಲಾಜೆ ವಿತ್ತ ಸಚಿವರಿಗೆ ಮನವಿ

ನವದೆಹಲಿ: ಕಳೆದ ಕೆಲವು ವರ್ಷಗಳಲ್ಲಿನ ಹವಾಮಾನ ವೈಪರೀತ್ಯದಿಂದ ತೀವ್ರತರದ ಸಂಕಷ್ಟದಲ್ಲಿರುವ ರಾಜ್ಯದ ಕಾಫಿ ಬೆಳೆಗಾರರ ಸಮಸ್ಯೆಗಳನ್ನು ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರು ಇಂದು ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತರಾಮನ್ ಅವರನ್ನು ಭೇಟಿಯಾಗಿ ಮನದಟ್ಟು ಮಾಡಿದರು.

ಕಳೆದ ಕೆಲವು ವರ್ಷಗಳಿಂದ ಮಲೆನಾಡಿನ ಕಾಫಿ ಬೆಳೆಗಾರರು ನಿತ್ಯವೂ ಅತಿವೃಷ್ಟಿ, ಅನಾವೃಷ್ಟಿ, ಕಾರ್ಮಿಕರ ಸಮಸ್ಯೆ, ಬೆಳೆಗೆ ತಕ್ಕ ಬೆಲೆ ಇಲ್ಲದಿರುವುದು ಸೇರಿದಂತೆ ಒಂದಲ್ಲಾ ಒಂದು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಲೇ ಬಂದಿದ್ದಾರೆ.

ಅತಿವೃಷ್ಟಿ, ರೋಗಬಾಧೆ ಮುಂತಾದ ಸಮಸ್ಯೆಗಳಿಂದ ಬಸವಳಿದ ಕಾಫಿ ಉದ್ಯಮವನ್ನು ಪುನಃಶ್ಚೇತನಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಅಗತ್ಯದ ಪರಿಹಾರ ಹಾಗೂ ಸಾಲ ನೀತಿಗಳನ್ನು ಬೆಳೆಗಾರರಿಗೆ ಸಹಾಯಕವಾಗುವ ನಿಟ್ಟಿನಲ್ಲಿ ಕೈಗೊಳ್ಳಬೇಕು, ಬೆಳೆಗಾರರ ಸಂಕಷ್ಟಕ್ಕೆ ಸಹಾಯ ಮಾಡುವಂತೆ ಸಂಸದೆ ಕೇಳಿಕೊಂಡರು.

ಕಾಫಿ ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಬದ್ಧವಾಗಿದೆ, ಈ ನಿಟ್ಟಿನಲ್ಲಿ ಅಗತ್ಯದ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರು ಭರವಸೆಯನ್ನು ನೀಡಿರುತ್ತಾರೆ.

Leave a Reply

Your email address will not be published. Required fields are marked *

error: Content is protected !!