ದಕ ಜಿಲ್ಲೆಯಲ್ಲಿ ಎಎಸ್‌ಐ, ಹೆಡ್ ಕಾನ್‌ಸ್ಟೇಬಲ್ ಸಹಿತ 116 ಪೊಲೀಸ್ ಸಿಬ್ಬಂದಿ ವರ್ಗಾವಣೆ!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 116 ಪೊಲೀಸ್ ಸಿಬ್ಬಂದಿಯನ್ನು ಆಡಳಿತಾತ್ಮಕ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ವರ್ಗಾವಣೆ ಮಾಡಲಾಗಿದೆ. ಈ ವರ್ಗಾವಣೆ ಆದೇಶವನ್ನು 2025ರ ಜೂನ್ 10 ರಂದು ಹೊರಡಿಸಲಾಗಿದೆ.
ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಿಗೆ ವರ್ಗಾವಣೆಗೊಂಡವರಲ್ಲಿ 7 ಸಹಾಯಕ ಸಬ್ ಇನ್ಸ್‌ಪೆಕ್ಟರ್‌ಗಳು, 31 ಸಿವಿಲ್ ಪೊಲೀಸ್ ಹೆಡ್ ಕಾನ್‌ಸ್ಟೆಬಲ್‌ಗಳು, ಮತ್ತು 78 ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್‌ಗಳು ಸೇರಿದ್ದಾರೆ.
ಈ ವರ್ಗಾವಣೆಯು ಜಿಲ್ಲೆಯ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಮತ್ತು ಆಡಳಿತಾತ್ಮಕ ದಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ





