ಶಾಸಕ ಗಂಟಿಹೊಳೆ ಪ್ರಯಾಣಿಸುತ್ತಿದ್ದ ಕಾರು ಅಪಘಾತ!
ಹೊಸನಗರ: ಜಾನುವಾರು ಅಡ್ಡ ಬಂದ ಪರಿಣಾಮ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರ ಕಾರು ಸೇರಿ ಮೂರು ಕಾರುಗಳು ಶುಕ್ರವಾರ ಸಂಜೆ ಕೋಡೂರು ಬಳಿ ಅಪಘಾತಕ್ಕೀಡಾದ ಘಟನೆ ಸಂಭವಿಸಿದೆ.
ಸರಣಿ ಅಪಘಾತದಲ್ಲಿ ಶಾಸಕರ ಕಾರು ಸೇರಿದಂತೆ 3 ಕಾರುಗಳು ಸ್ವಲ್ಪ ಮಟ್ಟಿಗೆ ಜಖಂಗೊಂಡಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂಬ ಮಾಹಿತಿ ಲಭಿಸಿದೆ.
ರಿಪ್ಪನ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಸಕ ಗುರುರಾಜ್ ಗಂಟಿಹೊಳೆ ಬೈಂದೂರು ಕಡೆ ಪ್ರಯಾಣ ಬೆಳಸಿದ್ದಾರೆ ಎಂಬ ಮಾಹಿತಿ ಲಭಿಸಿದೆ.





