ಉಡುಪಿ: ಮಹಿಳಾ ಠಾಣೆ ಸ್ಥಳಾಂತರಕ್ಕೆ ವಕೀಲರ ಸಂಘ ಮನವಿ

ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಇತ್ತೀಚೆಗೆ ಅಧಿಕಾರ ವಹಿಸಿಕೊಂಡ ಹರಿರಾಮ್ ಶಂಕರ್ ಅವರನ್ನು ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ನೇತೃತ್ವದ ನಿಯೋಗವು ಭೇಟಿಯಾಗಿ ಅವರಿಗೆ ಪುಷ್ಪಗುಚ್ಛ ನೀಡಿ ಅಭಿನಂದಿಸಿತು.

ಜಿಲ್ಲೆಯ ಕಾನೂನು ಸುವ್ಯವಸ್ಥೆ ಮತ್ತು ನಗರದ ಸಂಚಾರ ವ್ಯವಸ್ಥೆ ಕಾಪಾಡಲು ವಿಶೇಷ ಆದ್ಯತೆ ನೀಡುವಂತೆ ಹಾಗೂ ಉಡುಪಿ ನಗರ ಪೊಲೀಸ್ ಠಾಣೆಯು ಬಹಳ ಇಕ್ಕಟ್ಟಾಗಿರುವುದರಿಂದ ಆ ಠಾಣೆಯ ಮೇಲ್ಭಾಗದಲ್ಲಿರುವ ಮಹಿಳಾ ಠಾಣೆಯನ್ನು ಬೇರೆಡೆ ಸ್ಥಳಾಂತರಿಸುವಂತೆ ವಿನಂತಿಸಲಾಯಿತು. ಮತ್ತು ವಕೀಲರ ಸಂಘಕ್ಕೆ ಭೇಟಿ ನೀಡಿ “ಸಂವಾದ ಕಾರ್ಯಕ್ರಮ”ದಲ್ಲಿ ಭಾಗವಹಿಸುವಂತೆಯೂ ಆಹ್ವಾನಿಸಲಾಯಿತು.

ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಎಸ್.ಪಿ.ಯವರು ಅತಿ ಶೀಘ್ರ ವಕೀಲರ ಸಂಘಕ್ಕೆ ಭೇಟಿ ನೀಡುವುದಾಗಿ ಭರವಸೆ ನೀಡಿದರು. ನಿಯೋಗದಲ್ಲಿ ವಕೀಲರ ಸಂಘದ ಪದಾಧಿಕಾರಿಗಳಾದ ರಾಜೇಶ್ ಎ.ಆರ್., ಬೈಲೂರು ರವೀಂದ್ರ ದೇವಾಡಿಗ, ಸಂತೋಷ್ ಮೂಡುಬೆಳ್ಳೆ, ಜಯಕೃಷ್ಣ ಆಳ್ವ ಮತ್ತು ಆರೂರು ಸುಕೇಶ್ ಶೆಟ್ಟಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!