ನ.29 ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಉಡುಪಿ ಜಿಲ್ಲಾ ಭೇಟಿ

ಉಡುಪಿ: ಕೆ.ಪಿ.ಸಿ.ಸಿ. ಅಧ್ಯಕ್ಷರಾದ ಶ್ರೀ ಡಿ. ಕೆ. ಶಿವಕುಮಾರ್‌ರವರು ಉಡುಪಿ ಜಿಲ್ಲಾ ಭೇಟಿಯನ್ನು ಹಮ್ಮಿಕೊಂಡಿದ್ದು ನ.29 ರಂದು ಬೆಳಿಗ್ಗೆ 8 ಗಂಟೆಗೆ ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ. ಬಳಿಕ 11 ಗಂಟೆಗೆ ಉಡುಪಿ ಮಿಷನ್ ಆಸ್ಪತ್ರೆ ಬಳಿ ಇರುವ ಬಾಸೆಲ್ ಮಿಷನರೀಸ್ ಮೆಮೋರಿಯಲ್ ಆಡಿಟೋರಿಯಂನಲ್ಲಿ ನಡೆಯುವ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿರುವರು.

ಮಧ್ಯಾಹ್ನ 2 ಗಂಟೆಗೆ ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಹಾಗೂ ವಿವಿಧ ಮುಂಚೂಣಿ ಘಟಕಗಳ ಸಭೆಯಲ್ಲಿ ಭಾಗವಹಿಸಲಿರುವರು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!