VTU ಅಕಾಡೆಮಿಕ್ ಸೆನೆಟ್ ಸದಸ್ಯರಾಗಿ ಸಹ್ಯಾದ್ರಿಯ ಡಾ. ಮುಸ್ತಫಾ ಬಸ್ತಿಕೋಡಿ ನೇಮಕ

ಮಂಗಳೂರು: ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜೆಂಟ್ (SCEM) ಗೆ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ರಾದ ಡಾ. ಮುಸ್ತಫಾ ಬಸ್ತಿಕೋಡಿ ಅವರನ್ನು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (VTU) 9 ನೇ ಶೈಕ್ಷಣಿಕ ಸೆನೆಟ್ ಸದಸ್ಯರನ್ನಾಗಿ ನೇಮಕಗೊಂಡಿದ್ದಾರೆ.

ಈ ಪ್ರತಿಷ್ಠಿತ ನೇಮಕಾತಿಯನ್ನು VTUನ ಉಪಕುಲಪತಿಗಳು 25 ಜೂನ್ 2025 ರಂದು VTU ಕಾಯಿದೆ, 1994 ರ ಸೆಕ್ಷನ್ 22ರ ಅಡಿಯಲ್ಲಿ ಕರ್ನಾಟಕ ರಾಜ್ಯಪಾಲರ ಸಚಿವಾಲಯದ ಅಧಿಸೂಚನೆ ಸಂಖ್ಯೆ GS 06 TUM 2025 ಮೂಲಕ ಅಧಿಕೃತವಾಗಿ ಘೋಷಿಸಿದ್ದಾರೆ.

ಶೈಕ್ಷಣಿಕ ಸೆನೆಟ್ VTU ನ ಅತ್ಯುನ್ನತ ಶೈಕ್ಷಣಿಕ ಸಂಸ್ಥೆಯಾಗಿದ್ದು, ವಿಶ್ವವಿದ್ಯಾಲಯದ ಶೈಕ್ಷಣಿಕ ನೀತಿಗಳು ಮತ್ತು ನಿರ್ದೇಶನಗಳನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಈ ಗೌರವಾನ್ವಿತ ಸಂಸ್ಥೆಯಲ್ಲಿ ಡಾ. ಬಸ್ತಿಕೋಡಿ ಅವರ ಸೇರ್ಪಡೆಯು ತಾಂತ್ರಿಕ ಶಿಕ್ಷಣ ಮತ್ತು ಶೈಕ್ಷಣಿಕ ನಾಯಕತ್ವಕ್ಕೆ ಅವರ ಅತ್ಯುತ್ತಮ ಕೊಡುಗೆಗಳನ್ನು ಗುರುತಿಸುತ್ತದೆ.

ಸಹ್ಯಾದ್ರಿ ಕಾಲೇಜಿನ ಆಡಳಿತ ಮಂಡಳಿ, ಅಧ್ಯಾಪಕ ವೃಂದ ಹಾಗೂ ಸಿಬ್ಬಂದಿ ವರ್ಗ ಡಾ. ಬಸ್ತಿಕೋಡಿ ಇವರಿಗೆ ಅಭಿನಂದನಗಳನ್ನು ಕೋರಿದ್ದಾರೆ.

Leave a Reply

Your email address will not be published. Required fields are marked *

error: Content is protected !!