ದೇಶದಲ್ಲಿ ಅಂಬೇಡ್ಕರ್ ರವರಿಗೆ ಅತ್ಯಂತ ಗೌರವ ಕೊಡುವ ಪಕ್ಷ ಬಿಜೆಪಿ: ದಿನಕರ ಬಾಬು
ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ ಎಸ್ ಸಿ ಮೋರ್ಚಾ ಉಡುಪಿ ಜಿಲ್ಲೆ ವತಿಯಿಂದ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಆಯೋಜಿಸಲಾದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ ಬಾಬು ಇವರು ಭಾಗವಹಿಸಿ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ನಮನಗಳನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಮಾತನಾಡುತ್ತಾ ದೇಶದಲ್ಲಿ 370ನೇ ವಿಧಿಯನ್ನು ರದ್ದು ಮಾಡಿ ಸಂವಿಧಾನದ ಗೌರವವನ್ನು ಎತ್ತಿ ಹಿಡಿದ ಪಕ್ಷ ಭಾರತೀಯ ಜನತಾ ಪಾರ್ಟಿ ಎಂದು ತಿಳಿಸಿದರು. ಅಂಬೇಡ್ಕರ್ ರವರು ಅಧಿವೇಶದಲ್ಲಿ ಭಾಗವಹಿಸದೇ ಇದ್ದ ದಿನವನ್ನು ನೋಡಿಕೊಂಡು ಈ ಹಿಂದೆ ದೇಶದಲ್ಲಿ ಆಡಳಿತ ನಡೆಸಿದ ಪಕ್ಷ 370ನೇ ವಿಧಿಯನ್ನು ಅಂಗೀಕಾರ ಮಾಡಿದೆ ಈ ಮಸೂದೆಗೆ ಅಂಬೇಡ್ಕರ್ ರವರು ವಿರೋಧ ವ್ಯಕ್ತಪಡಿಸಿದ್ದರು ಆದರೂ ಕೂಡಾ ಮಸೂದೆಯನ್ನು ಹಿಂಪಡೆಯಲಿಲ್ಲ. ಯಾವಾಗ ಬಿಜೆಪಿ ಪಕ್ಷ ದೇಶದಲ್ಲಿ ಅಧಿಕಾರಕ್ಕೆ ಬಂದ ನಂತರದಲ್ಲಿ ಸನ್ಮಾನ್ಯ ಪ್ರಧಾನ ಮಂತ್ರಿಯವರಾದ ಶ್ರೀ ನರೇಂದ್ರ ಮೋದಿಯವರು 370ನೇ ವಿಧಿಯನ್ನು ರದ್ದು ಮಾಡಿ ಆದೇಶ ಹೊರಡಿಸಿದರು ಎಂದು ತಿಳಿಸಿದರು.
ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣ ಮೀಸಲಾತಿಯನ್ನು ತೆಗೆದು ಹಾಕುತ್ತಾರೆ ಎಂದು ಅನ್ಯ ಪಕ್ಷಗಳು ದಲಿತರನ್ನು ಹೆದರಿಸುತ್ತಾ ಬರುತ್ತಿದ್ದು ಈ ಬಗ್ಗೆ ಪ್ರಧಾನ ಮಂತ್ರಿಗಳು ಮೀಸಲಾತಿಯನ್ನು ತೆಗೆದು ಹಾಕುವುದಿಲ್ಲ ಎಂದು ಹೇಳಿಕೆ ನೀಡುವ ಮೂಲಕ ವಿರೋಧ ಪಕ್ಷಗಳ ಬಾಯಿ ಮುಚ್ಚಿಸಿದ್ದಾರೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಎಸ್ ಸಿ ಮೋರ್ಚಾ ಅಧ್ಯಕ್ಷರಾದ ಗೋಪಾಲ ಕಳೆಂಜಿ, ಪ್ರಧಾನ ಕಾರ್ಯದರ್ಶಿಗಳಾದ ಸದಾನಂದ, ಸೇಸು ಎರ್ಮಾಳ್, ಉಪಾಧ್ಯಕ್ಷರಾದ ಕೃಷ್ಣ ಮೂರ್ತಿ ಡಿಬಿ, ನಗರ ಎಸ್ ಸಿ ಮೋರ್ಚಾ ಅಧ್ಯಕ್ಷರಾದ ಕಿರಣ್ ಕುಮಾರ್ ಉಪಸ್ಥಿತರಿದ್ದರು.