ಕೆಪಿಸಿಸಿ ನೀತಿ, ಸಂಶೋಧನೆ-ತರಬೇತಿ ವಿಭಾಗಕ್ಕೆ ಉಡುಪಿ ಜಿಲ್ಲಾಧ್ಯಕ್ಷರಾಗಿ ಡಾ. ಗಣನಾಥ ಎಕ್ಕಾರು
ಉಡುಪಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ, ಸಂಶೋಧನೆ ಹಾಗೂ ತರಬೇತಿ ವಿಭಾಗಕ್ಕೆ ಉಡುಪಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರನ್ನಾಗಿ ಡಾ.ಗಣನಾಥ ಎಕ್ಕಾರು ರವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ರವರ ಆದೇಶಾನುಸಾರ ನೇಮಕ ಮಾಡಲಾಗಿದೆ.
ಕೆಪಿಸಿಸಿಯ ಮಾರ್ಗದರ್ಶನದಲ್ಲಿ ರಾಜ್ಯ ಮತ್ತು ಸ್ಥಳಿಯ ನಾಯಕರ ಸಹಕಾರದೊಂದಿಗೆ ನೀತಿ, ಸಂಶೋಧನೆ ಹಾಗೂ ತರಬೇತಿ ವಿಭಾಗದ ಸಂಘಟನೆ ಬಲಪಡಿಸಲು ಮತ್ತು ಆ ಮೂಲಕ ಪಕ್ಷದ ಬಲವರ್ಧನೆಯಲ್ಲಿ ಕಾರ್ಯೋನ್ಮುಖರಾಗಬೇಕೆಂದು ಸೂಚಿಸಿದೆ.





