ಗರುಡ ಗ್ಯಾಂಗ್‌ನ ಕುಖ್ಯಾತ ಆರೋಪಿಯನ್ನು ಗೂಂಡಾ ಕಾಯ್ದೆಯಡಿ ಬಂಧನಕ್ಕೆ ಆದೇಶ

ಉಡುಪಿ: ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಉಡುಪಿ ಇವರು ಗರುಡ ಗ್ಯಾಂಗ್‌ನ ಕುಖ್ಯಾತ ಆರೋಪಿ ಕಾರ್ಕಳದ ಕಂಪನ ಕೌಡೂರು ಗ್ರಾಮದ ಕಬೀರ್ ಅಲಿಯಾಸ್ ಕಬೀರ್ ಹುಸೇನ್(46) ಎಂಬಾತನಿಗೆ ಗೂಂಡಾ ಕಾಯ್ದೆ ಅಡಿ ಬಂಧನ ಆದೇಶ ಹೊರಡಿಸಿರುತ್ತಾರೆ.  

ಈತನು 2005ನೇ ಇಸವಿಯಿಂದ ಇಲ್ಲಿಯ ತನಕ ಕೊಲೆ, ಕೊಲೆ ಯತ್ನ, ದರೋಡೆ, ಸುಲಿಗೆ, ಕಳ್ಳತನ, ಜಾನುವಾರು ಕಳವು, ಸರಕಾರಿ ಅಧಿಕಾರಿಗಳ ಮೇಲೆ ಹಲ್ಲೆ ಮುಂತಾದ 17 ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ. ಇವುಗಳ ಪೈಕಿ ಈಗಾಗಲೇ ಎರಡು ಪ್ರಕರಣಗಳಲ್ಲಿ ಸಜೆ ಹೊಂದಿದ್ದು, 8 ಪ್ರಕರಣಗಳಲ್ಲಿ ಖುಲಾಸೆ ಹೊಂದಿರುತ್ತಾನೆ. ಮೂರು ಪ್ರಕರಣಗಳಲ್ಲಿ ರಾಜಿ ಮಾಡಿಕೊಂಡಿದ್ದು, ಎರಡು ಪ್ರಕರಣಗಳು ನ್ಯಾಯಾಲಯ ವಿಚಾರಣೆಯಲ್ಲಿ ಇರುತ್ತದೆ. ಉಳಿದ ಎರಡು ಪ್ರಕರಣಗಳು ಪೊಲೀಸ್ ತನಿಖೆಯಲ್ಲಿರುತ್ತದೆ. 

ಈತನು ಉಡುಪಿ ಜಿಲ್ಲೆಯ ಕಾರ್ಕಳ ನಗರ, ಹಿರಿಯಡ್ಕ, ಪಡುಬಿದ್ರಿ, ಮಣಿಪಾಲ, ಶಿರ್ವ,  ಕಾಪು ಠಾಣೆಗಳ ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ. 

ಉಡುಪಿ ಜಿಲ್ಲೆಯಲ್ಲಿ ಮಾತ್ರವಲ್ಲದೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮತ್ತು ಕೊಪ್ಪ,  ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು, ಮಂಗಳೂರು ನಗರ ವ್ಯಾಪ್ತಿಯ ಸುರತ್ಕಲ್ ಠಾಣೆಯ ಪ್ರಕರಣಗಳಲ್ಲೂ ಭಾಗಿಯಾಗಿರುತ್ತಾನೆ. ಸದ್ಯ ಆರೋಪಿಯನ್ನು ಗೂಂಡಾ ಬಂದಿಯನ್ನು ಬಂಧಿಸಿ ಮೈಸೂರು ಕೇಂದ್ರ ಕಾರಾಗೃಹಕ್ಕೆ ಬಿಡಲಾಗಿದೆ.

Leave a Reply

Your email address will not be published. Required fields are marked *

error: Content is protected !!