ಕಾಪು: ತಾಲೂಕು ಕನ್ನಡ ಜಾನಪದ ಪರಿಷತ್ ಅಧ್ಯಕ್ಷರಾಗಿ ಪ್ರಕಾಶ ಸುವರ್ಣ ಕಟಪಾಡಿ ಆಯ್ಕೆ
ಕಾಪು: ತಾಲೂಕು ಕನ್ನಡ ಜಾನಪದ ಪರಿಷತ್‌ನ ಅಧ್ಯಕ್ಷರಾಗಿ ಪತ್ರಕರ್ತ, ಸಿನೆಮಾ ನಿರ್ದೇಶಕ ಪ್ರಕಾಶ ಸುವರ್ಣ ಕಟಪಾಡಿ ಅವರನ್ನು ಆಯ್ಕೆ ಮಾಡಲಾಗಿದೆ.
ಇವರನ್ನು ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ಗಣೇಶ್ ಗಂಗೊಳ್ಳಿ ಅವರ ಶಿಫಾರಸ್ಸಿನ ಮೇರೆಗೆ ರಾಜ್ಯಾಧ್ಯಕ್ಷ ಡಾ.ಬಾಲಾಜಿ ಎಸ್. ಆಯ್ಕೆಮಾಡಿದ್ದು, ಪರಿಷತ್‌ನ ಗೌರವಾಧ್ಯಕ್ಷರಾಗಿ ಉದ್ಯಮಿ ಕೆ.ಸತ್ಯೇಂದ್ರ ಪೈ ಕಟಪಾಡಿ, ಗೌರವ ಸಲಹೆಗಾರರಾಗಿ ಹಿರಿಯ ಚಿಂತಕ ಬಿ.ಪುಂಡಲೀಕ ಮರಾಠೆ ಶಿರ್ವ, ಪ್ರಧಾನ ಕಾರ್ಯದರ್ಶಿಯಾಗಿ ಭುವನೇಶ್ ಪ್ರಭು ಹಿರೇಬೆಟ್ಟು, ಜತೆ ಕಾರ್ಯದರ್ಶಿಯಾಗಿ ಕಲಾವಿದೆ ಪವಿತ್ರ ಶೆಟ್ಟಿ ಕಟಪಾಡಿ ಅವರನ್ನು ಆಯ್ಕೆ ಮಾಡಲಾಗಿದೆ.
ಇನ್ನು ಪರಿಷತ್‌ನ ಕೋಶಾಧಿಕಾರಿಯಾಗಿ ರಂಗನಟ ಕೆ.ನಾಗೇಶ್ ಕಾಮತ್ ಕಟಪಾಡಿ, ಮಾಧ್ಯಮ ಕಾರ್ಯದರ್ಶಿಯಾಗಿ ಪತ್ರಕರ್ತ ರಾಕೇಶ್ ಕುಂಜೂರ್, ಸಂಘಟನಾ ಕಾರ್ಯದರ್ಶಿಯಾಗಿ ರಾಘವೇಂದ್ರ ಪ್ರಭು ಕರ್ವಾಲ್, ಸಂಚಾಲಕರಾಗಿ ಉಡುಪಿ ಬಾಲಕಿಯರ ಪದವಿಪೂರ್ವ ಕಾಲೇಜು ಉಪನ್ಯಾಸಕ ದಯಾನಂದ ಡಿ, ಸಂಪಾದಕರಾಗಿ ಯುವಸಾಹಿತಿ ದೀಪಕ್ ಕೆ. ಬೀರ ಪಡುಬಿದ್ರಿ, ಸಮಿತಿ ಸದಸ್ಯರಾಗಿ ಸಮಾಜಸೇವಕ ಸುನೀಲ್ ಜಾನ್ ಡಿಸೋಜಾ ಶಂಕರಪುರ, ಜಾನಪದ ಕಲಾವಿದ ಹರೀಶ್ ಹೇರೂರು, ಆಕಾಶವಾಣಿ ಕಲಾವಿದೆ ಭಾಗ್ಯಲಕ್ಷ್ಮೀ ಉಪ್ಪೂರು, ಶಂಕರ್ ಶೇರಿಗಾರ್ ಮಟ್ಟು, ನ್ಯತ್ಯಕಲಾವಿದೆ ಕಾವ್ಯ ಪೈ ಕುತ್ಯಾರು, ಗೀತಾ ಆಚಾರ್ಯ ಕಾಪು, ಲಕ್ಷ್ಮಣ್ ಟಿ ಕಟಪಾಡಿ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ವಿಭಾಗೀಯ ಸಂಚಾಲಕಿ ಡಾ.ಭಾರತಿ ಮರವಂತೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.