ಕುಂದಾಪುರದ ರೋಜರಿ ಸೊಸೈಟಿಗೆ ಸಾಧನಾ ಪ್ರಶಸ್ತಿ
ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಉತ್ಕೃಷ್ಟ ಸಹಕಾರಿ ಸೌಧದಲ್ಲಿ 1066ನೇ ವರ್ಷದ ಮಹಾ ಸಭೆ ನಡೆಯಿತು. ಮಹಾಸಭೆಯಲ್ಲಿ ಕುಂದಾಪುರದ ರೋಜರಿ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯು ಸಹಕಾರಿ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸಾಧನೆಯನ್ನು ಗುರುತಿಸಿ, ಸಂಸ್ಥೆಯು ಸಾಧಿಸಿದ ಸರ್ವತೋಮುಖ ಅಭಿವೃದ್ಧಿಗಾಗಿ ಸಾಧನಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಸಂಸ್ಥೆಯ ಕಾರ್ಯ ಸಾಧನೆಯನ್ನು ಪ್ರಶಂಸಿಸಿದ ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ಅವರು, ಕುಂದಾಪುರದ ರೋಜರಿ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯ ಅಧ್ಯಕ್ಷ ಜೋನ್ಸನ್ ಡಿ ಅಲ್ಮೆಡಾ ಹಾಗೂ ಕಾರ್ಯನಿರ್ವಹಣಾಧಿಕಾರಿ ಫಾಸ್ಕಲ್ ಡಿ ಸೋಜಾ ಅವರನ್ನು ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕ ಎಸ್ ರಾಜು ಪೂಜಾರಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.