ಉಡುಪಿ: ಮತ್ತೆ ಕೊರೊನಾ ಆರ್ಭಟ, 92 ಪಾಸಿಟಿವ್ ಪತ್ತೆ, ರಾಜ್ಯದಲ್ಲಿ ನಾಲ್ವರು ಬಲಿ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು ,ಜಿಲ್ಲೆಯಲ್ಲಿ 92 ಹೊಸ ಪಾಸಿಟಿವ್ ಪ್ರಕರಣಗಳು ದೃಢಗೊಂಡಿದ್ದು ಸೋಂಕಿತರ ಸಂಖ್ಯೆ 564 ಕ್ಕೆ ಏರಿಕೆ ಯಾಗಿ ರಾಜ್ಯದಲ್ಲಿ ಮತ್ತೆ ಒಂದರ ಸ್ಥಾನಕ್ಕೆ ಜಿಗಿದಿದೆ.
ಗುರುವಾರ ದೃಢಟಪಟ್ಟ ಸೋಂಕಿತರು ಮಹಾರಾಷ್ಟ್ರದಿಂದ ಬಂದವರು ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆಸಿದ್ದು, ಮಹಾಮಾರಿಗೆ ಗುರುವಾರ ಒಂದೇ ದಿನ ನಾಲ್ವರು ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸಾವಿನ ಸಂಖ್ಯೆ 57ಕ್ಕೆ ಏರಿಕೆಯಾಗಿದೆ.
ಇಂದು ಬೆಂಗಳೂರಿನಲ್ಲಿ ಇಬ್ಬರು ಹಾಗೂ ದಾವಣಗೆರೆ ಮತ್ತು ಗದಗದಲ್ಲಿ ತಲಾ ಒಬ್ಬರು ಕೊರೋನಾ ವೈರಸ್ ನಿಂದ ಮೃತಪಟ್ಟಿದ್ದಾರೆ.
ಇನ್ನು ಸೋಂಕಿತರ ಸಂಖ್ಯೆಯೂ ದಿನದಿಂದ ದಿನಕ್ಕೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಇಂದು ಒಂದೇ ದಿನ ಬರೋಬ್ಬರಿ 257 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 4320ಕ್ಕೆ ಏರಿಕೆಯಾಗಿದೆ.
ಉಡುಪಿ 92, ರಾಯಚೂರಿನಲ್ಲಿ 88 ಹಾಗೂ ಬೆಂಗಳೂರಿನಲ್ಲಿ 9 ಹೊಸ ಪ್ರಕರಣ ಸೇರಿದಂತೆ ರಾಜ್ಯದಲ್ಲಿ ಒಟ್ಟು 257 ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ