ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಆತ್ಮಹತ್ಯೆ ಯತ್ನ: ಉನ್ನತ ಮಟ್ಟದ ತನಿಖೆ ಅಗತ್ಯ – ಡಿಕೆಶಿ

ಕಾರವಾರ: ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಸಂತೋಷ್ ಅವರ ಆತ್ಮಹತ್ಯೆ ಯತ್ನ ಪ್ರಕರಣ ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಅವರ ಆತ್ಮಹತ್ಯೆ ಪ್ರಕರಣ ಗಂಭೀರವಾದ ವಿಚಾರವಾಗಿದ್ದು, ಸಂತೋಷ ಅವರನ್ನು ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯರೊಬ್ಬರು ಬ್ಲಾಕ್ ಮೇಲ್ ಮಾಡುತ್ತಿದ್ದರು ಎಂಬ ಸುದ್ದಿ ಎರಡು ತಿಂಗಳಿ0ದ ಹರಿದಾಡಿತ್ತು. ಇದರಲ್ಲಿ ಸಾಕಷ್ಟು ಗೌಪ್ಯ ಅಡಗಿದ್ದು, ಈ ಪ್ರಕರಣವನ್ನು ಸರಕಾರ ತನಿಖೆ ನಡೆಸುವುದರಲ್ಲಿ ಅರ್ಥವಿಲ್ಲ. ಇದಕ್ಕೆ ಉನ್ನತ ಮಟ್ಟದ ತನಿಖೆ ಅಗತ್ಯವಿದೆ ಎಂದು ಹೇಳಿದರು.

 ಸಂತೋಷ್ ಆತ್ಮಹತ್ಯೆ ಯತ್ನ ವಿಚಾರ ನನಗೆ ಗೊತ್ತಿದೆ. ಅವರ ಯಾವುದೋ ಒಂದು ವಿಡಿಯೋವನ್ನು ಬಳಸಿ ಒಬ್ಬ ಸಚಿವ ಹಾಗೂ ಎಂಎಲ್ ಸಿ ಬೆದರಿಕೆ ಹಾಕುತ್ತಿದ್ದರು. ಆ ವಿಡಿಯೋವನ್ನು ದಿಲ್ಲಿ ನಾಯಕರಿಗೂ ಕೊಟ್ಟಿದ್ದಾರೆ ಎಂಬ ಮಾಹಿತಿ ಎರಡು ಮೂರು ತಿಂಗಳ ಹಿಂದೆಯೇ ತಿಳಿದಿತ್ತು. ಈ ಬಗ್ಗೆ ಅವರಿಗೆ ಬೇಸರವಾಗಿದೆ ಎಂದು ತಿಳಿದು ಬಂದಿದೆ. ಈ ವಿಡಿಯೋ ಯಾರು ಕೊಟ್ಟಿದ್ದಾರೆ ಎಂಬ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯಲಿ ಎಂದು ಇದೇ ವೇಳೆ ಒತ್ತಾಯಿಸಿದರು.

Leave a Reply

Your email address will not be published. Required fields are marked *

error: Content is protected !!