ಜಾಗತಿಕ ಬಂಟರ ಸಂಘಗಳ ಒಕ್ಕೂಟ: ನ.29ರಂದು ವಿದ್ಯಾರ್ಥಿ ಸಹಾಯಧನ ವಿತರಣಾ ಸಮಾರಂಭ
ಉಡುಪಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟ ದ.ಕ ಮಂಗಳೂರು , ಉಡುಪಿ ಜಿಲ್ಲಾ ವಿವಿದ ಬಂಟರ ಸಂಘಗಳ ಸಹಯೋಗದೊಂದಿಗೆ ನ.29ರಂದು ಉಡುಪಿಯ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಸಮಾಜ ಕಲ್ಯಾಣ ಕಾರ್ಯಕ್ರಮ ಹಾಗೂ ವಿದ್ಯಾರ್ಥಿ ಸಹಾಯಧನ ವಿತರಣಾ ಸಮಾರಂಭವು ಬೆಳಿಗ್ಗೆ 11.30 ಕ್ಕೆ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರಗಲಿರುವುದು.
ಕಾರ್ಯಕ್ರಮದಲ್ಲಿ ಕೊರೋನಾ ಸಂತ್ರಸ್ತರಿಗೆ ಸಹಾಯ , ವೈದ್ಯಕೀಯ ನೆರವು , ಪ್ರತಿಭಾವಂತ ವಿಧ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ , ವಸತಿ ರಹಿತರಿಗೆ ಮತ್ತು ವಸತಿ ರಿಪೇರಿಗೆ ಸಹಾಯಧನ , ಹೆಣ್ಣು ಮಕ್ಕಳ ವಿವಾಹಕ್ಕೆ ನೆರವು ಮುಂತಾದ ಅವಶ್ಯಕತೆಗಳಿಗೆ ಸುಮಾರು ೧.೫೦ ಕೋಟಿ ರೂಪಾಯಿ ಸಹಾಯ ಧನ ವಿತರಿಸಲಾಗುವುದು. ಇದೇ ಸಂದರ್ಭದಲ್ಲಿ ಸಮಾಜ ಸೇವಕ , ಯಶಸ್ವಿ ಉದ್ಯಮಿ ಒಕ್ಕೂಟದ ನಿರ್ದೇಶಕ, ಕರ್ನಾಟಕ ರಾಜ್ಯ ಸರಕಾರದ 2020ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕುಸುಮೋಧರ ಡಿ ಶೆಟ್ಟಿ ಚೆಲ್ಲಡ್ಕ ದಂಪತಿಗಳನ್ನು ಸನ್ಮಾನಿಸಲಾಗುವುದು.
ಸಮಾರಂಭದಲ್ಲಿ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲು, ಉಡುಪಿ ವಿದಾನ ಸಭಾ ಶಾಸಕರಾದ ಕೆ. ರಘುಪತಿ ಭಟ್, ಶಾಸಕರುಗಳಾದ ಹಾಲಾಡಿ ಶೀನಿವಾಸ ಶೆಟ್ಟಿ,ಸುಕುಮಾರ ಶೆಟ್ಟಿ ಬೈಂದೂರು, ಸುನೀಲ್ ಕುಮಾರ್ ಕಾರ್ಕಳ, ಲಾಲಾಜಿ ಮೆಂಡನ್ ಕಾಪು, ಕೆ. ಪ್ರತಾಪ್ ಚಂದ್ರ ಶೆಟ್ಟಿ , ಕೆ. ಜಯಪ್ರಕಾಶ್ ಹೆಗ್ಡೆ, ಎಂ ಅರ್ .ಜಿ ಗ್ರೂಪ್‌ನ ಆಡಳಿತ ನಿರ್ದೇಶಕ ಕೆ.ಪ್ರಕಾಶ್ ಶೆಟ್ಟಿ, ಹಾಗೂ ಬಂಟ ಸಮಾಜದ ಪ್ರಮುಖ ಬಾಂದವರು ಸಮಾರಂಭದಲ್ಲಿ ಭಾಗವಹಿಸಲಿದ್ದು, ಉಡುಪಿ, ಕಾರ್ಕಳ, ಕುಂದಾಪುರ, ಶಿವಮೊಗ್ಗ,ದಾವಣಗೆರೆ, ಮುಂತಾದ ಕಡೆಗಳಲ್ಲಿನ ಬಂಟರ ಸಂಘದ ಸಮಾಜ ಬಾಂಧವರು ಹಾಗೂ ವಿದ್ಯಾರ್ಥಿಗಳು ಸಮಾರಂಭದಲ್ಲಿ ಭಾಗವಹಿಸಲಿರುವರು.
ಅಂದು ಬೆಳಿಗ್ಗೆ 10 ಗಂಟೆಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟಗಳ ಕಾರ್ಯಕಾರಿ ಸಮಿತಿಗಳ ಸಭೆ ನಡೆಯಲಿದ್ದು ,ಸಭಾ ಕಾರ್ಯಕ್ರಮದ ನಂತರದಲ್ಲಿ ಖ್ಯಾತ ಯಕ್ಷಗಾನ ಕಲಾವಿದರ ಕೂಡುವಿಕೆಯಲ್ಲಿ ಮಹಾಮಂತ್ರಿ ದುಷ್ಟಬುದ್ದಿ ಯಕ್ಷಗಾನ ನಡೆಯಲಿರುವುದು ಈ ಎಲ್ಲಾ ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿಗಳಾದ ಇಂದ್ರಾಳಿ ಜಯಕರ ಶೆಟ್ಟಿ ಇಂದ್ರಾಳಿಯವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.