ಮನೆಕೆಲಸದಾಕೆಯ ಅತ್ಯಾಚಾರ- ಅಪರಾಧಿ ಪ್ರಜ್ವಲ್ ರೇವಣ್ಣನಿಗೆ ಜೀವಾವಧಿ ಶಿಕ್ಷೆ!

ಬೆಂಗಳೂರು: ಓರ್ವ ಸಂಸದನಾಗಿದ್ದುಕೊಂಡೇ ಅತ್ಯಾಚಾರ ಮಾಡಿದ್ದು ಮಾತ್ರವಲ್ಲದೇ ಅದನ್ನು ವಿಡಿಯೋ ಮಾಡಿಕೊಂಡು ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನ್ಯಾಯಾಲಯ ಅಪರಾಧಿಗೆ ಜೀವವಾಧಿ ಶಿಕ್ಷೆ(ಜೀವನ ಪರ್ಯಾಂತ ಕಾರಾಗೃಹ ಶಿಕ್ಷೆ) ಹಾಗೂ 11ಲಕ್ಷ ರೂ. ದಂಡ ವಿಧಿಸಿ ನ್ಯಾಯಾಧೀಶರಾದ ಸಂತೋಷ್ ಗಜಾನನ್ ಭಟ್ ಆದೇಶಿಸಿದ್ದಾರೆ.

ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸಿದ ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ಅವರು, ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ ಒಟ್ಟು 10 ಲಕ್ಷ ರೂ. ದಂಡ ವಿಧಿಸಲಾಗಿದೆ. ಈ 10 ಲಕ್ಷ ರೂ.7 ಲಕ್ಷ ರೂ. ಸಂತ್ರಸ್ತೆಗೆ ಪರಿಹಾರ ನೀಡುವಂತೆ ಕೋರ್ಟ್ ಸೂಚಿಸಿದೆ.

ಮೈಸೂರಿನ ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಶುಕ್ರವಾರ ತೀರ್ಪು ನೀಡಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇದೀಗ ಶಿಕ್ಷೆಯ ಪ್ರಮಾಣ ಪ್ರಕಟಿಸಲು ವಾದ-ಪ್ರತಿ ವಾದ ಆಲಿಸಿದೆ.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಬಿಎನ್‌ ಜಗದೀಶ್‌ ಅವರು ವಾದ ಮಂಡನೆ ಮಾಡಿದರೆ, ಪ್ರಜ್ವಲ್‌ ರೇವಣ್ಣ ಪರವಾಗಿ ಹಿರಿಯ ವಕೀಲೆ ನಳಿನಿ ಮಾಯೇಗೌಡ ವಾದ ಮಂಡಿಸಿದರು.

Leave a Reply

Your email address will not be published. Required fields are marked *

error: Content is protected !!