ಕೋಟ: ಭೀಕರ ಅಪಘಾತ ಯುವತಿ ಸಾವು, ಇನ್ನೋರ್ವ ಯುವತಿ ಗಂಭೀರ
ಕೋಟ: (ಉಡುಪಿ ಟೈಮ್ಸ್ ವರದಿ)ಕೋಟ ರಾಷ್ಟ್ರೀಯ ಹೆದ್ದಾರಿ ಕೃಷ್ಣಭವನ ಹೋಟೆಲ್ ಬಳಿಯ ಶನಿವಾರ ನಡೆದ ಅಪಘಾತದಲ್ಲಿ ಓರ್ವ ಯುವತಿ ಸಾವನ್ನಪ್ಪಿ, ಇನ್ನೋರ್ವ ಯುವತಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಕುಂದಾಪುರದಿಂದ ಬ್ರಹ್ನಾವರ ಕಡೆ ಸ್ಕೂಟಿಯಲ್ಲಿ ಬರುತ್ತಿದ್ದ ಸಂದರ್ಭ ಫಾರ್ಚೂನ್ ವಾಹನ ಸ್ಕೂಟಿಗೆ ಹಿಂದಿನಿಂದ ಡಿಕ್ಕಿ ಹೊಡೆದು ಇಬ್ಬರೂ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗಳಾಗಿತ್ತು. ಈ ಅವಘಡಲ್ಲಿ ತಲೆಗೆ ಗಂಭೀರ ಗಾಯಗೊಂಡ ಬೇಳೂರು ನಿವಾಸಿ ಶ್ರೇಯಾ ಶಾನುಭಾಗ್ (24) ಮೃತಪಟ್ಟಿದ್ದು, ಉಜಿರೆ ಮೂಲದ ಪ್ರಜ್ನಾ (25) ಗಂಭೀರ ಗಾಯಗೊಂಡಿದ್ದು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ .
ಅಪಘಾತ ಎಸಗಿದ ಕಾರು ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದು, ಕೋಟದ ಜೀವನ್ ಮಿತ್ರ ಆ್ಯಂಬುಲೆನ್ಸ್ ಮಾಲಿಕ ನಾಗರಾಜ್ ಪುತ್ರನ್ ಅವರ ಸಮಯ ಪ್ರಜ್ಞೆಯಿಂದ ಸಾಸ್ತಾನ ಟೋಲ್ ಬಳಿ ವಾಹನ ತಡೆದು ಕೋಟ ಪೊಲೀಸ್ ಠಾಣೆಗೆ ಒಪ್ಪಿಸಲಾಯಿತು. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.