ಉಡುಪಿ: ದೇವಸ್ಥಾನ, ಮಸೀದಿ, ಚರ್ಚ್ ಗೆ ಭೇಟಿ ನೀಡಿದ ಡಿಕೆಶಿ
ಉಡುಪಿ: ಶನಿವಾರ ರಾತ್ರಿ ಉಡುಪಿಗೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಮಲಶಿಲೆ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನ, ಭಾನುವಾರ ಬೆಳಗ್ಗೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ಕೊಟ್ಟು ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ. ನಂತರ ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ದೇಗುಲಕ್ಕೂ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಉಡುಪಿಯಲ್ಲಿ ಸಮಾವೇಶದಲ್ಲಿ ಭಾಗವಹಿಸಿ, ಶ್ರೀಕೃಷ್ಣ ಮಠಕ್ಕೆಭೇಟಿ ನೀಡಿ, ದೇವರ ದರ್ಶನ ಪಡೆದು ಪರ್ಯಾಯ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು. ಬಳಿಕ ಜಾಮಿಯಾ ಮಸೀದಿ ಮತ್ತು ಮದರ್ ಆಫ್ ಸ್ವಾರೋಸ್ ಚರ್ಚ್ ಗೆ ಭೇಟಿ ನೀಡಿ ಬಿಷಪ್ ರ ಆಶೀರ್ವಾದ ಪಡೆದುಕೊಂಡರು.