ಕೃಷ್ಣ ಮಠದ ನಾಮಫಲಕದಲ್ಲಿ ಕನ್ನಡ ಭಾಷೆ ತೆಗೆದು ಹಾಕಿದಕ್ಕೆ ಕಸಾಪ ತೀವ್ರ ಆಕ್ಷೇಪ

ಉಡುಪಿ: ಕೃಷ್ಣ ಮಠದ ನಾಮಫಲಕದಲ್ಲಿ ಕನ್ನಡವನ್ನು ತೆಗೆದು ಹಾಕಿದ್ದು ಸರಿಯಾದ ಕ್ರಮವಲ್ಲ. ಕನ್ನಡ ಸಾಹಿತ್ಯ ಪರಿಷತ್ ಇದನ್ನು ಉಗ್ರವಾಗಿ ಖಂಡಿಸುತ್ತದೆ. ಕನ್ನಡ ನಾಡಿನಲ್ಲಿ ಮೊದಲು ಕನ್ನಡಕ್ಕೆ ಆಧ್ಯತೆ.
ನಾಮಫಲಕ ದಲ್ಲಿ ಮೊದಲು ಕನ್ನಡ ಇರಬೇಕು. ಅನಂತರ ಇತರ ಭಾಷೆ. ಒಂದು ಧಾರ್ಮಿಕ ಸಂಸ್ಥೆ ಭಾಷೆಗಳ ನಡುವೆ ಕಂದಕ ಸೃಷ್ಟಿಸುವುದು ಸರಿಯಲ್ಲ. ನಾಮ ಫಲಕದ ಈ ಪ್ರಕರಣ ಸರ್ಕಾರದ ಕಾನೂನಿನ ಸ್ವಷ್ಟ ಉಲ್ಲಂಘನೆಯಾಗಿದೆ. ಇದನ್ನು ಕೂಡಲೇ ಸರಿಪಡಿಸಬೇಕು. ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ ಮುಂದೆ ಇದನ್ನು ಸರಿಪಡಿಸುವವರೆಗೂ ಹೋರಾಟ ಅನಿವಾರ್ಯ.

ಸಮಾಜಕ್ಕೆ ಮಾರ್ಗದರ್ಶನ ಮಾಡುವವರೆ ಇಂತಹ ಕುಚೋದ್ಯ ಕೆಲಸಕ್ಕೆ ಕೈ ಹಾಕಿರುವುದು  ಕ್ಷಮಿಸಲಾಗದ ಅಪರಾಧ. ಕನ್ನಡ ಸಾಹಿತ್ಯ ಪರಿಷತ್ ಇದನ್ನು ಉಗ್ರವಾಗಿ ಖಂಡಿಸುತ್ತದೆ. ಸಂಬಂಧಪಟ್ಟವರು ತಕ್ಷಣ ಇದನ್ನು ಸರಿಪಡಿಸಬೇಕು.ಇದು ಕನ್ನಡ ಸಾಹಿತ್ಯ ಪರಿಷತ್ ನ ಹಕ್ಕೊತ್ತಾಯವಾಗಿದೆ.

ನಾಮಫಲಕದಲ್ಲಿ ಕನ್ನಡ ಭಾಷೆ ತೆಗೆದು ತುಳು ಭಾಷೆ ಹಾಕಿದ್ದು ಸರಿಯಲ್ಲ. ಬೇರೆ ಭಾಷೆಯನ್ನು ಬೆಳೆಸುವಾಗ ಮೊದಲು ಕನ್ನಡ ವನ್ನೇ ಬಳಸಬೇಕು. ಕನ್ನಡ ಭಾಷೆ ಯನ್ನು ಕೈ ಬಿಟ್ಟು ಬೇರೆ ಭಾಷೆಯನ್ನು ಬಳಸಿದ್ದು ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ. ಮೊದಲು ಕನ್ನಡ. ಅನಂತರ ಇತರೆ ಭಾಷೆ ನಾಮಫಲಕದಲ್ಲಿಇರಲಿ.

ಕನ್ನಡ ಮತ್ತು ಸೋದರ ಭಾಷೆ ತುಳುವಿನ ನಡುವೆ ಕಂದಕ ನಿರ್ಮಾಣ ಮಾಡುವುದನ್ನು ಪರಿಷತ್ ತೀವ್ರ ವಾಗಿ ಖಂಡಿಸುತ್ತದೆಂದು ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲಾ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ..

Leave a Reply

Your email address will not be published. Required fields are marked *

error: Content is protected !!