ರಸ್ತೆಬದಿ ಉರುಳಿಬಿದ್ದ ಲಾರಿ: ಚಾಲಕ ಅಪಾಯದಿಂದ ಪಾರು

ವಿಟ್ಲ(ಉಡುಪಿ ಟೈಮ್ಸ್ ವರದಿ): ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ಟಯರ್ ಗಳನ್ನು ಹೇರಿಕೊಂಡು ಬರುತ್ತಿದ್ದ  ಈ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದಿದೆ.

ಘಟನೆಯಿಂದ ಲಾರಿ ಚಾಲಕ ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.ಇಂದು ನಸುಕಿನ ಜಾವ 4:30 ರ ಸುಮಾರಿಗೆ ಈ ಘಟನೆ ನಡೆದಿದ್ದುಲಾರಿಯನ್ನು ತೆರವುಗೊಳಿಸುವ ಕಾರ್ಯ ನಡೆದಿದೆ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!