ಗಣೇಶ ಮೂರ್ತಿ ಮೆರವಣಿಗೆ ವೇಳೆ ಟ್ರಕ್ ಹರಿದು ಆರು ಮಂದಿ ಮೃತ್ಯು, 20ಕ್ಕೂ ಹೆಚ್ಚು ಮಂದಿಗೆ ಗಾಯ!
ಹಾಸನ: ಗಣೇಶ ಮೂರ್ತಿ ಮೆರವಣಿಗೆ ವೇಳೆ ಟ್ರಕ್ ಹರಿದು ಆರು ಜನ ಸಾವನ್ನಪ್ಪಿರುವ ದಾರುಣ ಘಟನೆ ಹಾಸನದಲ್ಲಿ ನಡೆದಿದೆ. ಗಣಪತಿ ಮೂರ್ತಿ ವಿಸರ್ಜನೆಗಾಗಿ ಮೆರವಣಿಗೆ ಮೂಲಕ ತೆರಳುತ್ತಿದ್ದಾಗ ವೇಗವಾಗಿ ಬಂದ ಟ್ರಕ್ ಜನರ ಗುಂಪಿನ ಮೇಲೆ ನುಗ್ಗಿದ್ದು ಸ್ಥಳದಲ್ಲೇ ಆರು ಜನ ಸಾವನ್ನಪ್ಪಿರುವ ಘಟನೆ ಹಾಸನದ ಮೊಸಳೆಹೊಸಳ್ಳಿ ಬಳಿ ನಡೆದಿದೆ.
ಇನ್ನು ಅಪಘಾತದಲ್ಲಿ 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಹಲವರ ಸ್ಥಿತಿ ಗಂಭೀರವಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.





