ಎರ್ಮಾಳು ಫಿಶರೀಸ್ ರಸ್ತೆ ಪಕ್ಕದ ಮನೆ ಸೀಲ್ಡೌನ್
ಕಾಪು: ಹೊರ ರಾಜ್ಯದಿಂದ ಬಂದು 14 ದಿನದ ಕ್ವಾರಂಟೈನ್ ಮುಗಿಸಿ ಮನೆಗೆ ಬಂದ ವ್ಯಕ್ತಿಗೆ ಕೋವಿಡ್–19 ದೃಢಪಟ್ಟ ಹಿನ್ನೆಲೆಯಲ್ಲಿ ಅವರು ವಾಸಿಸುತ್ತಿದ್ದ ಎರ್ಮಾಳು ಫಿಶರೀಸ್ ರಸ್ತೆಯ ಪಕ್ಕದ ಮನೆಯನ್ನು ಸೀಲ್ಡೌನ್ ಮಾಡಲಾಗಿದೆ.
ಕಾಪು ತಹಶೀಲ್ದಾರ್ ಇಸಾಖ್, ಕಾಪು ಕಂದಾಯ ಪರಿವೀಕ್ಷಕ ರವಿಶಂಕರ್ ಹಾಗೂ ಪಡುಬಿದ್ರಿ ಠಾಣಾಧಿಕಾರಿ ಸುಬ್ಬಣ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುನ್ನೆಚ್ಚರಿಕಾ ಕ್ರಮವಾಗಿ ಮನೆ ಸೀಲ್ಡೌನ್ ಮಾಡಿದ್ದು, ಸ್ಥಳೀಯ ನಿವಾಸಿಗಳಲ್ಲಿ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ.