ಉಡುಪಿ: ಜಿಲ್ಲೆಯಲ್ಲಿ ಉಸ್ತುವಾರಿ ಸಚಿವರ ಪ್ರವಾಸ
ಉಡುಪಿ, ಡಿ. 2: ರಾಜ್ಯದ ಗೃಹ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ
ಬಸವರಾಜ ಬೊಮ್ಮಾಯಿ ಡಿಸೆಂಬರ್ 3 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕನಕದಾಸ ಜಯಂತಿ ದಿನಾಚರಣೆ ಕಾರ್ಯಕ್ರಮ, 10.30 ಕ್ಕೆ ಉಡುಪಿಯ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ
ಸಬಲೀಕರಣ ಇಲಾಖೆ ಆಯೋಜಿಸಿರುವ ವಿಶ್ವ ವಿಕಲಚೇತನರ ದಿನಾಚರಣೆಯ ಉದ್ಘಾಟನಾ ಸಮಾರಂಭ, 11 ಕ್ಕೆ ಜಿಲ್ಲಾಸ್ಪತ್ರೆಯ ದ್ರವ ರೂಪದ ಆಮ್ಲಜನಕ ನೂತನ ಘಟಕ ಉದ್ಘಾಟನೆ ಹಾಗೂ ಜಿಲ್ಲಾಸ್ಪತ್ರೆಯ ನೂತನ ಕಟ್ಟಡದ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸುವರು, ಮಧ್ಯಾಹ್ನ 12 ಕ್ಕೆ ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಸಂಜೆ 4 ಗಂಟೆಗೆ ಮಣಿಪಾಲದಲ್ಲಿ ಶ್ರೀಮತಿ ಇಂದಿರಾಗಾoಧಿ ಮೆಟ್ರಿಕ್ ನಂತರದ ನರ್ಸಿಂಗ್ ವಿದ್ಯಾರ್ಥಿ ನಿಲಯದ ಕಟ್ಟಡ ಉದ್ಘಾಟನಾ ಸಮಾರಂಭ, 4.15 ಕ್ಕೆ ಮಣಿಪಾಲದಲ್ಲಿ ಶ್ರೀ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿ ನಿಲಯದ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮ, 4.45 ಕ್ಕೆ ನಿಟ್ಟೂರಿನಲ್ಲಿ ಶ್ರೀ.ಡಿ
ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ಕಟ್ಟಡ ಉದ್ಘಾಟನಾ ಸಮಾರಂಭ, 5.30 ಕ್ಕೆ ಮಲ್ಪೆ ಸೀ-ವಾಕ್ ಬಳಿಯ ಬಯಲು ರಂಗ ಮಂದಿರ ಹಾಗೂ ಉದ್ಯಾನವನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು.