ಮಲ್ಪೆ ಸೀ-ವಾಕ್ ಬಳಿಯ ಬಯಲು ರಂಗಮಂದಿರ, ಉದ್ಯಾನವನ ಡಿ.3ರಂದು ಉದ್ಘಾಟನೆ
ಉಡುಪಿ, ಡಿ. 2: ಜಿಲ್ಲಾಡಳಿತ, ಮಲ್ಪೆ ಅಭಿವೃದ್ಧಿ ಸಮಿತಿ ಇವರ ವತಿಯಿಂದ
ಮಲ್ಪೆ ಸೀ-ವಾಕ್ ಬಳಿಯ ಬಯಲು ರಂಗಮಂದಿರ ಹಾಗೂ ಉದ್ಯಾನವನದ ಉದ್ಘಾಟನಾ ಸಮಾರಂಭವು ಡಿಸೆಂಬರ್ 3ರಂದು ಸಂಜೆ 5.30 ಕ್ಕೆ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದು, ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿರುವರು. ಉಡುಪಿ ಶಾಸಕ ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.