ಗ್ರಾನೈಡ್ ಸ್ಪೋಟ – ಇಬ್ಬರು ಪೊಲೀಸರಿಗೆ ಗಾಯ

ಕಾಸರಗೋಡು: ತರಬೇತಿ ನಡೆಯುತ್ತಿದ್ದ ವೇಳೆ, ಗ್ರಾನೈಡ್ (ಅಶ್ರುವಾಯು) ಸ್ಪೋಟಗೊಂಡು ಇಬ್ಬರು ಪೊಲೀಸರು ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ಕಾಸರಗೋಡು ಸಶಸ್ತ್ರ ಮೀಸಲು ಪಡೆಯ ಮೈದಾನದಲ್ಲಿ ನಡೆದಿದೆ. ಸುಧಾಕರ ಹಾಗೂ ಪವಿತ್ರ ಅವರು ಗಾಯಗೊಂಡ ಪೊಲೀಸ್ ಅಧಿಕಾರಿಗಳು.

ಈ ಪೈಕಿ ಸುಧಾಕರ ಅವರ ತಲೆಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಅವರಿಗೆ ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಕೋಝಿಕ್ಕೋಡ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯಾಡಳಿತ ಚುನಾವಣೆ ಹಿನ್ನಲೆಯಲ್ಲಿ ತರಬೇತಿ ನಡೆಯುತ್ತಿದ್ದಾಗ ಆಕಸ್ಮಿಕವಾಗಿ ಗ್ರಾನೈಡ್ ಸ್ಪೋಟಗೊಂಡು ಈ ಅವಘಡ ನಡೆದಿದೆ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!