ಮತದಾರರ ಪಟ್ಟಿ ಪಾರದರ್ಶಕವಾಗಿರಲಿ: ಡಾ.ಎಂ.ಟಿ ರೇಜು

ಉಡುಪಿ, ಡಿ.5: ಜಿಲ್ಲೆಯ ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಯಾವುದೇ
ಲೋಪದೋಷಗಳು ಕಂಡು ಬರದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ , ಅಂತಿಮ ಮತದಾರರ ಪಟ್ಟಿಯನ್ನು ಅತ್ಯಂತ ಪಾರದರ್ಶಕವಾಗಿ ಸಿದ್ದಪಡಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಮತದಾರರ ಪಟ್ಟಿಯ ವೀಕ್ಷಕರಾದ
ಡಾ.ಎಂ.ಟಿ.ರೇಜು ಹೇಳಿದರು, ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ , ಜಿಲ್ಲೆಯ ಮತದಾರರ ಪಟ್ಟಿ ಪರಿಷ್ಕರಣೆ ಕುರಿತ , ಜಿಲ್ಲಾ ಚುನಾವಣಾಧಿಕಾರಿಗಳು, ಮತದಾರರ ಪಟ್ಟಿ ಪರಿಷ್ಕರಣೆ ಅಧಿಕಾರಿಗಳು ಮತ್ತು ಸಹಾಯಕ ಮತದಾರರ ಪಟ್ಟಿ ಪರಿಷ್ಕರಣೆ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪರಿಷ್ಕರಣೆ ಸಂದರ್ಭದಲ್ಲಿ ಈಗಾಗಲೇ ಮರಣ ಹೊಂದಿದವರು, ಎರಡು ಕ್ಷೇತ್ರಗಳಲ್ಲಿ ಹೆಸರು ಹೊಂದಿರುವವರನ್ನು ಗುರುತಿಸಿ ಅವರನ್ನು ಪಟ್ಟಿಯಿಂದ ಕೈಬಿಡಿ, ಹೆಸರುಗಳ ತಿದ್ದುಪಡಿ, ಒಂದು ಕ್ಷೇತ್ರದಿಂದ ಮತ್ತೊಂದು ಕ್ಷೇತ್ರಕ್ಕೆ ವರ್ಗಾವಣೆ ಪ್ರಕರಣಗಳನ್ನು
ಎಚ್ಚರಿಕೆಯಿಂದ ಪರಿಶೀಲಿಸಿ, ಅನುಮೋದನೆ ನೀಡುವಂತೆ ಎಲ್ಲಾ ತಹಸೀಲ್ದಾರ್ ಗಳಿಗೆ ಡಾ. ರೇಜು ಸೂಚಿಸಿದರು. ರಾಜಕೀಯ ಪಕ್ಷಗಳು ಸಹ ಮತದಾರರ ಪಟ್ಟಿಯಲ್ಲಿ ತಮ್ಮ ಗಮನಕ್ಕೆ ಆಕ್ಷೇಪಗಳನ್ನು ಜಿಲ್ಲಾಡಳಿತದ ಗಮನಕ್ಕೆ ತರಬೇಕು, ಇದರಿಂದ ಚುನಾವಣೆಯನ್ನು ಸುಗಮವಾಗಿ ನಡೆಸಲು ಸಾದ್ಯವಾಗಲಿದೆ, ಜಿಲ್ಲಾಡಳಿತದ ಮೂಲಕ ಕರಡು ಮತದಾರರ ಪಟ್ಟಿಯನ್ನು ಪಡೆದು ಪರಿಶೀಲಿಸಿ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಿ, ತಮ್ಮ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯಲ್ಲಿನ ತಿದ್ದುಪಡಿ, ಯುವಮತದಾರರ ಸೇರ್ಪಡೆ ಮುಂತಾದವುಗಳ ಕುರಿತು ಸಾರ್ವಜನಿಕರಿಗೆ ಅಗತ್ಯ ಮಾಹಿತಿ ನೀಡುವಂತೆ ಹಾಜರಿದ್ದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ತಿಳಿಸಿದರು.

ಮತದಾರರ ಪಟ್ಟಿಯಲ್ಲಿ ಮರಣ ಹೊಂದಿದವರ ಹೆಸರುಗಳನ್ನು ಕೂಡಲೇ ತೆಗೆಯಬೇಕು, ಕೆಲವರು ಹೆಸರುಗಳು ಪುನರಾವರ್ತನೆಯಾಗಿದ್ದು ಅಂತಹವುಗಳನ್ನು ತೆಗೆಯಬೇಕು, ಕುಟುಂಬದ ಎಲ್ಲಾ ಸದಸ್ಯರ ಹೆಸರುಗಳನ್ನು ಒಂದೇ ಕಡೆ ಬರುವಂತೆ ಪಟ್ಟಿಯನ್ನು ಸಿದ್ದಪಡಿಸುವಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಕೋರಿದರು.

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ, ವರ್ಗಾವಣೆ, ತೆಗೆದು ಹಾಕುವಿಕೆಗಳಿಗೆ ಸಂಬoದಿಸಿದoತೆ ಸಾರ್ವಜನಿಕರಿಂದ ಸ್ವೀಕರಿಸಲಾಗುವ ಅರ್ಜಿಗಳನ್ನು ವಿಳಂಬಕ್ಕೆ ಆಸ್ಪದ ನೀಡದಂತೆ ಎಚ್ಚರಿಕೆಯಿಂದ ಪರಿಶೀಲಿಸ ಅನುಮೋದನೆ ನೀಡುವಂತೆ ಎಲ್ಲಾ ತಹಸೀಲ್ದಾರ್ ಗಳಿಗೆ ಸೂಚಿಸಿದ ಡಾ. ರೇಜು, ಜಿಲ್ಲೆಯಲ್ಲಿ ಯುವ ಮತದಾರರನ್ನು ಹೆಚ್ಚಿನ
ಸಂಖ್ಯೆಯಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜಿ.ಜಗದೀಶ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತ ರಾಜು ಹಾಗೂ ಜಿಲ್ಲೆಯ ಎಲ್ಲಾ ತಹಸೀಲ್ದಾರ್ ಗಳು ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ಪ್ರಸ್ತುತ ನ.18 ರಂದು ಪ್ರಕಟಗೊಂಡ ಕರಡುಮತದಾರರ ಪಟ್ಟಿಯಲ್ಲಿ, 485747 ಪುರುಷ , 522464 ಮಹಿಳಾ ಮತ್ತು 9 ಇತರೆ ಸೇರಿದಂತೆ ಒಟ್ಟು 1008220 ಮತದಾರರಿದ್ದು, ಮಿಂಚಿನ ನೊಂದಣಿ ಕಾರ್ಯಕ್ರಮದಲ್ಲಿ ಇದುವರೆಗೆ 3164
ಅರ್ಜಿಗಳನ್ನು ಸ್ವೀಕರಿಸಲಾಗಿದೆ, ಡಿಸೆಂಬರ್ 17 ರ ವರೆಗೆ ನಡೆಯುವ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅವಧಿಯಲ್ಲಿ , ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ವಿಳಾಸ ಬದಲಾವಣೆ ಸೇರಿದಂತೆ ಅಗತ್ಯ ತಿದ್ದುಪಡಿ ಮಾಡಿಕೊಳ್ಳಲು ಅವಕಾಶವಿದೆ.

Leave a Reply

Your email address will not be published. Required fields are marked *

error: Content is protected !!