ಉಗ್ರರೊಂದಿಗೆ ಸಂಪರ್ಕ: ದೆಹಲಿ ಪೊಲೀಸರಿಂದ ಐವರ ಬಂಧನ
ನವದೆಹಲಿ: ಭಯೋತ್ಪಾದಕ ಸಂಘಟನೆಗಳೊoದಿಗೆ ಸಂಪರ್ಕ ಹೊಂದಿದ ಆರೋಪದ ಮೇಲೆ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಶಾರ್ಪುರದಲ್ಲಿ ನಡೆದಿದೆ. ಶಾರ್ಪುರದಲ್ಲಿ ದೆಹಲಿ ಪೊಲೀಸರು ಎನ್ಕೌಂಟರ್ ನಡೆಸಿದ ಸಂದರ್ಭದಲ್ಲಿ ಪಂಜಾಬ್ ಮೂಲದ ಇಬ್ಬರು ಹಾಗೂ ಜಮ್ಮು ಕಾಶ್ಮೀರದ ಮೂವರನ್ನು ಬಂಧಿಸಿದ್ದಾರೆ.
ಬಂಧಿತರ ಬಳಿ ಇದ್ದ ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಸೇರಿದಂತೆ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರು ಪಾಕ್ ಮೂಲದ ಉಗ್ರ ಸಂಘಟನೆಗಳೊoದಿಗೆ ಸಂಪರ್ಕ ಹೊಂದಿರುವ ಸಾಧ್ಯತೆಗಳಿವೆ ಎಂದು ಶಂಕಿಸಲಾಗಿದ್ದು, ಈ ನಿಟ್ಟಿನಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಡಿಸಿಪಿ ಪ್ರಮೋದ್ ಸಿಂಗ್ ಕುಶ್ವಾ ತಿಳಿಸಿದ್ದಾರೆ.