ಡಿ.8 ಭಾರತ್ ಬಂದ್: ರಾಜ್ಯ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಬೆಂಬಲ
ಬೆoಗಳೂರು: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಾಳೆ(ಡಿ.8) ಭಾರತ್ ಬಂದ್ಗೆ ಕರೆ ನೀಡಲಾಗಿದೆ. ಈ ಭಾರತ್ ಬಂದ್ಗೆ ರಾಜ್ಯ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟವೂ ಬೆಂಬಲ ಸೂಚಿಸಿದ್ದು, ಒಂದು ದಿನದ ಮಟ್ಟಿಗೆ ಆನ್ ಲೈನ್ ತರಗತಿಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ.
ಈ ಬಗ್ಗೆ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್ ಮಾಹಿತಿ ನೀಡಿ, ರೈತ ಸಂಘಟನೆಗಳಿಗೆ ಬೆಂಬಲ ಕೊಟ್ಟು ನಾವು ಕೂಡ ಬಂದ್ ಮಾಡಲು ನಿರ್ಧರಿಸಿದ್ದು, ಮಂಗಳವಾರ(ಡಿ.8) ಒಂದು ದಿನ ಆನ್ ಲೈನ್ ತರಗತಿಗಳು ನಡೆಯುವುದಿಲ್ಲ. ಆದರೆ ಆನ್ ಲೈನ್ ಪರೀಕ್ಷೆಗಳು ನಿಗದಿಯಾಗಿದ್ದರೆ ಅವುಗಳನ್ನು ಮಾತ್ರ ನಡೆಸಲಾಗುವುದು ಎಂದು ಹೇಳಿದ್ದಾರೆ.