ಉಡುಪಿ: ಬಳಕೆದಾರ ವೇದಿಕೆ ಸಂಚಾಲಕ, ಹಿರಿಯ ಪತ್ರಕರ್ತ ಕೆ. ದಾಮೋದರ ಐತಾಳ ನಿಧನ

ಉಡುಪಿ: ಉಡುಪಿ ಬಳಕೆದಾರ ವೇದಿಕೆ ವಿಶ್ವಸ್ಥ, ಹಿರಿಯ ಪತ್ರಕರ್ತ ಕಡಿಯಾಳಿ ನಿವಾಸಿ ದಾಮೋದರ್ ಐತಾಳ್(85) ಮಂಗಳವಾರ ಬೆಳಿಗ್ಗೆ ನಿಧನರಾಗಿದ್ದಾರೆ.

ಅವರು ಕನ್ನಡ ಪಂಡಿತರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದರು. ನಿವೃತ್ತಿ ಬಳಿಕ ಪತ್ರಿಕಾ ವರದಿಗಾರನಾಗಿ, ಉಡುಪಿ ಪತ್ರಕರ್ತರ ಸಂಘದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು. ಮಂಗಳೂರು ಡಿಡಿಪಿಐ ಕಚೇರಿಯಲ್ಲಿ ವಿಷಯ ಪರಿವೀಕ್ಷಣಾ ಅಧಿಕಾರಿಯಾಗಿದ್ದ ಐತಾಳರು, ಉಡುಪಿ ಶಿಕ್ಷಕರ ಸಹಕಾರಿ ಬ್ಯಾಂಕ್ ನ ಕಾರ್ಯನಿರ್ವಾಹಕ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಮೃತರು ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!