ಉಡುಪಿ: ಜಿಲ್ಲೆಯಲ್ಲಿ ನಾಟಕ ಪ್ರದರ್ಶನಕ್ಕೆ ಗ್ರೀನ್ ಸಿಗ್ನಲ್
ಉಡುಪಿ: ಈ ಕೊರೊನಾ ಮಹಾಮಾರಿ ರೋಗದಿಂದ ಕಳೆದ 10 ತಿಂಗಳಿನಿಂದ ಒಂದೇ ಒಂದು ನಾಟಕ ಪ್ರದರ್ಶವಾಗದೇ ಸಹಸ್ರಾರು ಕಲಾವಿದರ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿತ್ತು. ಈ ಬಗ್ಗೆ ಉಡುಪಿ ಜಿಲ್ಲೆಯ ವೃತ್ತಿಪರ ನಾಟಕ ತಂಡಗಳ ಪರವಾಗಿ ಸಮಾಜರತ್ನ ಲೀಲಾಧರ ಶೆಟ್ಟಿ ಕರಂದಾಡಿ ಇವರ ಮುಂದಾಳತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿಯಾದ ಜಿ, ಜಗದೀಶ್ ಅವರಿಗೆ ನಾಟಕ ಪ್ರದರ್ಶನಕ್ಕೆ ಅನುಮತಿಯನ್ನು ಯಾಚಿಸಿ ಮನವಿಯನ್ನು ನೀಡಲಾಯಿತು.
ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಯವರು ಸರಕಾರದ ಕೋವಿಡ್ 19 ನಿಯಮಗಳನ್ನು ಪಾಲಿಸಿಕೊಂಡು ನಾಟಕ ಪ್ರದರ್ಶನ ನಡೆಸಲು ಅನುಮತಿಯನ್ನು ನೀಡಿದರು.
ಜಿಲ್ಲೆಯಲ್ಲಿ ಸರಿ ಸುಮಾರು 15 ರಿಂದ 20 ನಾಟಕ ತಂಡಗಳು ವೃತ್ತಿಪರವಾಗಿ ನಾಟಕ ಪ್ರದರ್ಶನ ಮಾಡುತ್ತಿದ್ದು ತಂಡದ ಸಹಸ್ರಾರು ನಾಟಕ ಕಲಾವಿದರು ಹಾಗೂ ತಂತ್ರಜ್ಞರು ಆರ್ಥಿಕವಾಗಿ ನಾಟಕವನ್ನೇ ಅವಲಂಬಿಸಿರುತ್ತಾರೆ.
ಈ ಸಂಧರ್ಭದಲ್ಲಿ ಚೈತನ್ಯ ಕಲಾವಿದರು ಬೈಲೂರು ತಂಡದ ಪ್ರಸನ್ನ ಶೆಟ್ಟಿ ಬೈಲೂರು, ಕಾಪು ರಂಗತರಂಗ ತಂಡದ ಶರತ್ ಉಚ್ಚಿಲ ಹಾಗೂ ಮರ್ವಿನ್ ಶಿರ್ವ, ತೆಲಿಕೆದ ತೆನಾಲಿ ಕಾರ್ಕಳ ತಂಡದ ಸುನಿಲ್ ನೆಲ್ಲಿಗುಡ್ಡೆ, ಅಭಿನಯ ಕಲಾವಿದರು ಉಡುಪಿ ತಂಡದ ಉಮೇಶ್ ಅಲೆವೂರು, ಕಾರ್ತಿಕ್ ಕಡೇಕಾರ್ ಹಾಗೂ ವಿಕ್ರಮ್ ಮಂಚಿ, ಹಾಗೂ ನವಸುಮ ಕೊಡವೂರು ತಂಡದ ಬಾಲಕೃಷ್ಣ ಕೊಡವೂರು, ಕಲಾಚಾವಡಿ ಉಡುಪಿ ತಂಡದ ಪ್ರಭಾಕರ್ ಆಚಾರ್ಯ ಮೂಡುಬೆಳ್ಳೆ, ಸಿಂಧೂರ ಕಲಾವಿದರು ಕಾರ್ಕಳ ತಂಡದ ಹಮೀದ್ ಮಿಯಾರು ಹಾಗೂ ಸಂದೀಪ್ ಬಾರಾಡಿ, ನಮ್ಮ ಕಲಾವಿದರು ಪಿತ್ರೋಡಿ ತಂಡದ ನವೀನ್ ಸಾಲ್ಯಾನ್ ಪಿತ್ರೋಡಿ, ಸಾಕ್ಷಿ ಕಲಾವಿದರು ಬೆಳಪು ತಂಡದ ಶುಭಕರ್ ಬೆಳಪು ಹಾಗೂ ಇನ್ನಿತರರು ಉಪಸ್ಥಿತರಿದ್ದರು.