ಪುಲ್ವಾಮಾ: ಇಬ್ಬರು ಉಗ್ರರ ಸದೆಬಡಿದ ರಕ್ಷಣಾ ಪಡೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ರಕ್ಷಣಾ ಪಡೆ ಮೂಲಗಳು ತಿಳಿಸಿವೆ.

ಪುಲ್ವಾಮಾ ನಗರದಲ್ಲಿ ಬುಧವಾರ ಬೆಳಗ್ಗೆ ಈ ಕಾರ್ಯಾಚರಣೆ ನಡೆದಿದೆ. ಖಚಿತ ಮಾಹಿತಿಯ ಮೇಲೆ ಭದ್ರತಾಪಡೆ ಸಿಬ್ಬಂದಿ ಉಗ್ರರು ಅಡಗಿದ್ದ ತಾಣದ ಮೇಲೆ ಕಾರ್ಯಾಚರಣೆಗೆ ನಡೆಸಿದ್ದಾರೆ.

ಉಗ್ರರು ಅಡಗಿರುವ ತಾಣವನ್ನು ಸುತ್ತವರಿದ ಸಂದರ್ಭದಲ್ಲಿ ಗುಂಡಿನ ಚಕಮಕಿ ನಡೆದಿದೆ. ಅಲ್ಲಿ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಉಗ್ರರು ಇರಬಹುದು ಎಂದು ಶಂಕಿಸಲಾಗಿದೆ. ಕಾರ್ಯಾಚರಣೆ ಮುಂದುವರೆದಿದೆ.

Leave a Reply

Your email address will not be published. Required fields are marked *

error: Content is protected !!