ಮುಂದಿನ 3 ದಿನ ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ!

ಬೆಂಗಳೂರು ಡಿ.9: ನಿನ್ನೆ ರಾತ್ರಿ ರಾಜ್ಯದ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗಿದೆ. ಇದರ ಜೊತೆಗೆ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಡಿ. 8ರಂದು ರಾಜ್ಯದ ದಕ್ಷಿಣ ಒಳನಾಡು, ಕರಾವಳಿಯಲ್ಲಿ ಭಾರಿ ಮಳೆಯಾಗಿದ್ದು, ಮುಂದಿನ ಮೂರು ದಿನಗಳ ಕಾಲ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇನ್ನು ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿಯಲ್ಲಿ ಒಣಹವೆ ಮುಂದುವರೆಯಲಿದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Leave a Reply

Your email address will not be published. Required fields are marked *

error: Content is protected !!