ರಾಜ್ಯ ಸರ್ಕಾರಕ್ಕೆ ಮತ್ತೊಂದು ಶಾಕ್!: ನಾಳೆ ಸಾರಿಗೆ ನೌಕರರಿಂದ ಬೃಹತ್ ಪ್ರತಿಭಟನೆ
ಬೆಂಗಳೂರು : ರೈತ ಸಂಘಟನೆಗಳ ಹೋರಾಟದ ಕಾವು ತಣ್ಣಗಾಗುವ ಮೊದಲೇ ರಾಜ್ಯ ಸರ್ಕಾರಕ್ಕೆ ಮತ್ತೊಂದು ಪ್ರತಿಭಟನೆಯ ಬಿಸಿ ತಟ್ಟುವ ಸಾಧ್ಯತೆ ಇದೆ. ಯಾಕೆಂದರೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ನಾಳೆ ಸಾರಿಗೆ ನೌಕರರಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂಬ ಸುದ್ಧಿಯೊಂದು ವರದಿಯಾಗಿದೆ. ಸಾರಿಗೆ ನೌಕರರನ್ನು ಸರ್ಕಾರಿ ನೌಕರರಾಗಿ ಘೋಷಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ನಾಳೆ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ, ವಿಧಾನಸೌಧಕ್ಕೆ ಕಾಲ್ನಡಿಗೆಯಲ್ಲಿ ನೌಕರರು ಜಾಥ ತೆರಳಲಿದ್ದಾರೆ. ಸಾರಿಗೆ ನೌಕರರ ಈ ಹೋರಾಟಕ್ಕೆ ರಾಜ್ಯ ರೈತ ಸಂಘ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳು ಬೆಂಬಲ ಸೂಚಿಸಿದ್ದು, ಈ ಜಾಥಾದಲ್ಲಿ ಕೆಎಸ್ಆರ್ ಟಿಸಿ, ಬಿಎಂಟಿಸಿ, ಈಶಾನ್ಯ ಮತ್ತು ವಾಯುಯ್ಯ ಸಾರಿಗೆ ನಿಗಮಗಳಿಂದ ಸುಮಾರು 5000 ದಿಂದ 10000 ನೌಕರರು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. |