ಡಿ.12: ಎನ್.ಎಚ್. ನಾಗೂರು ಅವರ ಪುಸ್ತಕಗಳ ಪುಸ್ತಕ ಲೋಕಾರ್ಪಣೆ

ಉಡುಪಿ: ಕನ್ನಡ ಸಾಹಿತ್ಯ  ಪರಿಷತ್ತು ಉಡುಪಿ ಇದರ ವತಿಯಿಂದ ಸಾರ್ವಜನಿಕ ಶಿಕ್ಷಣ ಇಲಾಖೆ  ಉಡುಪಿ ಇದರ ಉಪನಿರ್ದೇಶಕ  ಎನ್ ಎಚ್ ನಾಗೂರು ಇವರು ರಚಿಸಿರುವ ಪುಸ್ತಕಗಳ ಪುಸ್ತಕ ಲೋಕಾರ್ಪಣಾ ಕಾರ್ಯಕ್ರಮ ಡಿ. 12 ರಂದು ಉಡುಪಿಯ ಬಡಗುಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಯ ಜಗನ್ನಾಥ ಸಭಾಭವನದಲ್ಲಿ ನಡೆಯಲಿದೆ.

ಉಡುಪಿ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಎನ್.ಎಚ್. ನಾಗೂರು ಮಾತನಾಡಿ, ಕಾರ್ಯಕ್ರಮವನ್ನು ಬಡಗುಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಉದ್ಘಾಟಿಸಲಿದ್ದಾರೆ. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ  ಎನ್ ಎಚ್ ನಾಗೂರು ಅವರ, ಶೈಕ್ಷಣಿಕ ಲೇಖನಗಳ ಸಂಕಲನ `ಶಿಕ್ಷಣ ಸಿರಿ’ ಪುಸ್ತಕವನ್ನು ಉಡುಪಿಯ ಡಾ. ಟಿ.ಎಂ.ಎ.ಪೈ  ಶಿಕ್ಷಣ ಮಹಾ ವಿದ್ಯಾಲಯದ ಸಮನ್ವಯಾಧಿಕಾರಿ ಡಾ. ಮಹಾಬಲೇಶ್ವರ ರಾವ್, ಶೈಕ್ಷಣಿಕ ಕವನ ಸಂಕಲನ `ಅಕ್ಷರ ಅಂಬಾರಿ’ ಪುಸ್ತಕವನ್ನು ಅಖಿಲ ಭಾರತ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷ ಹಾಗೂ ಅಂಕಣಕಾರ ಸುರೇಂದ್ರ ನಾಥ್ ಶೆಟ್ಟಿ, ಪುರಾತನ ಶರಣ ಬಾವೂರ ಬೊಮ್ಮಯ್ಯ ಪುಸ್ತಕವನ್ನು ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಓ ಅರ್ ಪ್ರಕಾಶ್ ಲೋಕಾರ್ಪಣೆ ಗೊಳಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಡಯಟ್ ಉಡುಪಿ ಇದರ ಉಪನಿರ್ದೇಶಕ ವೇದ ಮೂರ್ತಿ,  ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಶ್ರಾಂತ ಉಪನಿರ್ದೇಶಕ ಶೇಷಶಯನ ಕಾರಿಂಜ, ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಕಳ ತಾಲೂಕು ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪಸ್ಥಿತಿ ಇರಲಿದ್ದಾರೆ ಎಂದು ಎನ್.ಎಚ್. ನಾಗೂರು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!