ಕೇಂದ್ರದ ಮೋದಿ ಸರಕಾರದ ವಿರುದ್ಧ ಬನ್ನಂಜೆ ಕಾಂಗ್ರೆಸ್ ಕಾರ್ಯಕರ್ತರಿಂದ ಧರಣಿ ಮುಷ್ಕರ

ಉಡುಪಿ: ಕೇಂದ್ರ ಸರಕಾರವು ಕಾಂಗ್ರೆಸ್ ಪಕ್ಷದ ಮಹತ್ವಾಕಾಂಕ್ಷಿ ಯೋಜನೆಯದ ಮನರೇಗಾ ಕಾಯಿದೆಯನ್ನು ಪುನಃ ಜಾರಿಗೊಳಿಸಬೇಕೆಂದು ಆಗ್ರಹಿಸಿ ಇಂದು ಬನ್ನಂಜೆ ವಾರ್ಡ್ ನ ಕಾಂಗ್ರೆಸ್ ಕಾರ್ಯಕರ್ತರು ಸುರೇಶ್ ಶೆಟ್ಟಿ ಬನ್ನಂಜೆ ನೇತೃತ್ವದಲ್ಲಿ ಉಡುಪಿ ತಾಲೂಕು ಕಚೇರಿ ಬಳಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ನಾಯಕರಾದ ಪ್ರಸಾದ್ ರಾಜ್ ಕಾಂಚನ್ ಕೆಪಿಸಿಸಿ ಸದಸ್ಯ ದಿನೇಶ್ ಪುತ್ರನ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು, ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರಾದ ಶೇಖರ್ ಶೆಟ್ಟಿ, ಪ್ರಭಾಕರ್ ಶೆಟ್ಟಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರದ ಡಾ. ಸಂದೀಪ್ ಸನಿಲ್, ಸುರೇಂದ್ರ, ಅಜರುದ್ದೀನ್, ಪ್ರವೀಣ್ ಪ್ರಭಾಕರ್, ರವಿ ಶೆಟ್ಟಿ, ಪ್ರಭಾಕರ್ ಶೆಟ್ಟಿ ಕರಾವಳಿ,ಹಬೀಬ್ ಆಲಿ, ಸದಾಶಿವ ಕಟ್ಟೆಗುಡ್ಡೆ ಚೇತನ್ ಪೂಜಾರಿ ಹಾಗೂ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮಹಿಳಾ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!