ಬಾಲಿವುಡ್‌ನ ಖ್ಯಾತ ನಿರ್ದೇಶಕ ರೋಹಿತ್ ಶೆಟ್ಟಿ ಮನೆಗೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ನ ಖ್ಯಾತ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮನೆ ಮೇಲೆ ಗುಂಡಿನ ದಾಳಿ ನಡೆದಿದೆ. ಮುಂಬೈನ ಜುಹುನಲ್ಲಿ ರೋಹಿತ್ ಶೆಟ್ಟಿ ನಿವಾಸದ ಮೇಲೆ ಕಳೆದ ರಾತ್ರಿ ದಾಳಿ ನಡೆದಿದೆ.

ಗುಂಡಿನ ದಾಳಿಯಲ್ಲಿ ಯಾವುದೇ ಪ್ರಾಣಹಾನಿ ಆಗಿಲ್ಲ. ಒಟ್ಟು ನಾಲ್ಕು ಸುತ್ತು ಗುಂಡು ಹಾರಿಸಲಾಗಿದೆ ಎಂದು ಸ್ಥಳೀಯರು ಹೇಳಿದರು. ಕೃತ್ಯ ಮಾಡಿದವರು ಯಾರು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ರೋಹಿತ್ ಶೆಟ್ಟಿ ನಿವಾಸಕ್ಕೆ ಹೆಚ್ಚಿನ ಭದ್ರತೆ ನೀಡಲಾಗಿದೆ ಸುತ್ತಮುತ್ತಲಿನ ಪ್ರದೇಶದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!