ಬುರೆವಿ ಚಂಡಮಾರುತ: ರಾಜ್ಯದಲ್ಲಿ ಡಿ.12 ರವರೆಗೆ ಭಾರೀ ಮಳೆ ಸಾಧ್ಯತೆ
ಬೆಂಗಳೂರು: (ಉಡುಪಿ ಟೈಮ್ಸ್ ವರದಿ)ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ದಕ್ಷಿಣ ಭಾರತದ ಕರಾವಳಿ ತೀರಕ್ಕೆ ಬುರೆವಿ ಚಂಡಮಾರುತ ಅಪ್ಪಳಿಸಿದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ.
ಇದಲ್ಲದೆ, ಇದರ ಪ್ರಭಾವ ಇನ್ನೂ ಒಂದು ದಿನ ಇರಲಿದ್ದು ರಾಜ್ಯದ ಕರಾವಳಿ ಜಿಲ್ಲೆ ಸೇರಿದಂತೆ ಹಲವೆಡೆ ಇಂದು ಮತ್ತೆ ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹಲಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಶಿವಮೊಗ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ರಾಮನಗರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಡಿ. 12ರವರೆಗೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.