ಬೀಡಿನಗುಡ್ಡೆ: ಸದಾ ಕಸದ ರಾಶಿಯ ಮೈದಾನ ಪ್ರದೇಶ ಈಗ ಬಣ್ಣ ಬಣ್ಣಗಳ ಚಿತ್ತಾರದಿಂದ ಕಂಗೊಳಿಸುತ್ತಿದೆ
ಉಡುಪಿ: ಸದಾ ಕಸದ ರಾಶಿಗಳಿಂದ ತುಂಬಿರುತ್ತಿದ್ದ ವಳಕಾಡು ವಾರ್ಡಿನ ಬೀಡಿನಗುಡ್ಡೆ ಮೈದಾನದ ಹತ್ತಿರದ ಪ್ರದೇಶ(ಬ್ಲಾಕ್ ಸ್ಟಾಟ್) ಇದೀಗ ಬಣ್ಣ ಬಣ್ಣಗಳ ಚಿತ್ತಾರದಿಂದ ಕಂಗೊಳಿಸುತ್ತಿದೆ.
ಉಡುಪಿ ನಗರವನ್ನು ಸ್ವಚ್ಛವಾಗಿಸುವ ನಿಟ್ಟಿನಲ್ಲಿ ಉಡುಪಿ ನಗರಸಭೆ ಎಸ್.ಬಿಎಂ 2.0ರ ಐಇಸಿ ಘಟಕದ ಇಂಟರ್ ಪರ್ಸನಲ್ ಕಮ್ಯೂನಿಕೇಶನ್ ಸ್ಕಿಲ್ ಉಪಘಟಕದಡಿ ನೇಮಕಗೊಂಡ 24 ಮಂದಿ ಕಮ್ಯೂನಿಟಿ ಮೊಬಿಲೈಸರ್‍ಗಳು ಪೌರಾಯುಕ್ತರ ಮಾರ್ಗದರ್ಶನದಲ್ಲಿ, ಉಡುಪಿ ನಗರಸಭೆಯ ಆರೋಗ್ಯ ನಿರೀಕ್ಷರು ಮತ್ತು ಸೂಪರ್ ವೈಸರ್‍ಗಳ ಸಹಯೋಗದೊಂದಿಗೆ, ಉಡುಪಿ ನಗರವನ್ನು ಸ್ವಚ್ಛವಾಗಿಟ್ಟುವ ಕಾಯಕದಲ್ಲಿ ನಿರಂತರ ತೊಡಗಿದ್ದಾರೆ.

ಇದರ ಮುಂದುವರಿದ ಭಾಗವಾಗಿ ಸಿಟಿ ವಿಭಾಗದ ಕಮ್ಯೂನಿಟಿ ಮೊಬಿಲೈಸರ್‍ಗಳು ಬೀಡಿನಗುಡ್ಡೆ ಮೈದಾನದ ಹತ್ತಿರದ ಪ್ರದೇಶ(ಬ್ಲಾಕ್ ಸ್ಟಾಟ್)ದಲ್ಲಿ ಸುಂದರ ಗಾರ್ಡನ್ ನಿರ್ಮಿಸಿ ಮತ್ತೆ ಅಲ್ಲಿ ಕಸದ ರಾಶಿ ಬೀಳದಹಾಗೆ ಬ್ಯಾನರ್ ಅಳವಡಿಸಿದ್ದಾರೆ. ನಗರವನ್ನು ಸ್ವಚ್ಛ ಸುಂದರವಾಗಿಸುವ ಇಂತಹ ಕಾರ್ಯ ನಿರಂತರ ನಡೆಯುತ್ತಿದ್ದು ನಗರಸಭೆಯ ಕಮ್ಯೂನಿಟಿ ಮೊಬಿಲೈಸರ್‍ಗಳ ಕಾರ್ಯಕ್ಕೆ ಸಾರ್ವಜನಿಕರು ಸಹಕಾರ ನೀಡಿದಲ್ಲಿ ಉಡುಪಿ ಜಿಲ್ಲೆ ಸ್ವಚ್ಛ ಜಿಲ್ಲೆಯಾಗುತ್ತದೆ. ಈ ಬಗ್ಗೆ ಪರಿಸರ ಅಭಿಯಂತರಾದ ರವಿಪ್ರಕಾಶ್ ಅವರು ಮಾಹಿತಿ ನೀಡಿ, ಬ್ಲಾಕ್ ಸ್ಪಾಟ್‍ಗಳಲ್ಲಿ ಸಾರ್ವಜನಿಕರು ಹಾಕುವ ಕಸವನ್ನು ವಿಲೇವಾರಿ ಮಾಡುವುದರಿಂದ ಅಲ್ಲಿ ಮತ್ತೆ ಮತ್ತೆ ಕಸದರಾಶಿ ಬೀಳುತ್ತಲೇ ಇರುತ್ತದೆ ವಿನಹ ಕಸ ಕಡಿಮೆಯಾಗುವುದಿ ಲ್ಲ ಆದ್ದರಿಂದ ಸ್ವಚ್ಛ ಉಡುಪಿ ಪರಿಕಲ್ಪನೆಗೆ ತ್ಯಾಜ್ಯ ವಿಲೇವಾರಿ ಮಾಡುವುದೊಂದೇ ಪರಿಹಾರಲ್ಲ ಅಲ್ಲದೇ ಕಸ ಹಾಕಿದವರಿಗೆ ದಂಡವಿಧಿಸುವುದು ಕೂಡಾ ನಿರಂತರ ಸಾಧ್ಯವಿಲ್ಲ ಆದ್ದರಿಂದ ತ್ಯಾಜ್ಯ ರಾಶಿ ಇರುವ ಪ್ರದೇಶದಲ್ಲಿ ತ್ಯಾಜ್ಯವನ್ನು ವಿಲೇವಾರಿ ಮಾಡಿ ಆ ಪ್ರದೇಶವನ್ನು ಸುಂದರ ಪ್ರದೇಶವಾಗಿ ಮಾರ್ಪಾಡು ಮಾಡಿ ಗಾರ್ಡನ್ ನಿರ್ಮಿಸಿ ಬ್ಯಾನರ್ ಹಾಕುವ ಮೂಲಕ ಬ್ಲಾಕ್ ಸ್ಪಾಟ್‍ಗಳನ್ನೇ ನಿರ್ಮೂಲನೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ನಗರಸಭಾ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ಇದೇ ರೀತಿ ಬ್ಲಾಕ್ ಸ್ಪಾಟ್‍ಗಳನ್ನು ಬ್ಯೂಟಿಫಿಕೇಶನ್ ಮಾಡುವ ಉದ್ದೇಶ ಹೊಂದಿರುವುದಾಗಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಪೌರಾಯುಕ್ತರಾದ ಮಹಾಂತೇಶ್ ಹಂಗರಗಿ, ಪರಿಸರ ಅಭಿಯಂತರಾದ ರವಿ ಪ್ರಕಾಶ್, ಆರೋಗ್ಯ ನಿರೀಕ್ಷಕರಾದ ಸತೀಶ್, ಪ್ರಕಾಶ್ ಪ್ರಭು, ಹರೀಶ್ ಬಿಲ್ಲವ ಹಾಗೂ ಸಿಟಿ ವಿಭಾಗದ ಸೂಪರ್ ವೈಸರ್‍ಗಳು, ಕಮ್ಯೂನಿಟಿ ಮೊಬಿಲೈಸರ್‍ನವರು ಭಾಗವಹಿಸಿದ್ದಾರೆ.





