ಕಾಸರಗೋಡು: ಅಕ್ರಮ ಗಾಂಜಾ ಸಾಗಾಟ ಓರ್ವ ಸೆರೆ

ಕಾಸರಗೋಡು : ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು  ಕುಂಬಳೆ ಅಬಕಾರಿ ದಳದ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮಂಜೇಶ್ವರ ಪಾವೂರಿನ ರಾಜೇಶ್ (30) ಎಂದು ಗುರುತಿಸಲಾಗಿದೆ.

ಬಂಧಿತನಿಂದ ಮೂರು ಕಿಲೋ ಗಾಂಜಾ, ಬೈಕ್ ವಶಕ್ಕೆ ಪಡೆದುಕೊಂಡಿದ್ದಾರೆ. ಕಾಸರಗೋಡಿನಮಂಜೇಶ್ವರದ ಗೇರುಕಟ್ಟೆಯಲ್ಲಿ ಅಬಕಾರಿ ಪೊಲೀಸರು ತಪಾಸಣೆ ನಡೆಸುತ್ತಿದ್ದ ವೇಳೆ ಬೈಕನ್ನು ತಡೆದು ಪರಿಶೀಲನೆ ನಡೆಸಿದಾಗ  ಗಾಂಜಾ ಪತ್ತೆಯಾಗಿದ್ದು, ಆರೋಪಿಯನ್ನು  ವಶಕ್ಕೆ ಪಡೆದುಕೊಂಡಿದ್ದಾರೆ.

ಇದರ ಜೊತೆಗೆಸ್ಥಳೀಯಾಡಳಿತ ಸಂಸ್ಥೆ ಚುನಾವಣೆ , ಕ್ರಿಸ್ಮಸ್  ಹಾಗೂ ಹೊಸ ವರ್ಷದ ಹಿನ್ನೆಲೆಯಲ್ಲಿ ಹೊರ ರಾಜ್ಯಗಳಿಂದ ಅಕ್ರಮ ಮದ್ಯ, ಗಾಂಜಾ ಸೇರಿದಂತೆ ಅಕ್ರಮ ಸಾಗಾಟಕ್ಕೆ ಕಡಿವಾಣ ಹಾಕಲು ಗಡಿ ಪ್ರದೇಶದಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!