ಕ್ಯಾಂಟರ್ ಪಲ್ಟಿ: ಎಂಟು ಜಾನುವಾರು ಸ್ಥಳದಲ್ಲೇ ಸಾವು
ಶಿವಮೊಗ್ಗ: ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಕ್ಯಾಂಟರ್ ಪಲ್ಟಿಯಾಗಿ ಎಂಟು ಎತ್ತು ಹಾಗೂ ಎಮ್ಮೆಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಸಮೀಪ ಇಂದು ಮುಂಜಾನೆ ನಡೆದಿದೆ.
ಅಪಘಾತದ ವೇಳೆ ಸ್ಥಳೀಯರು ಹಾಗೂ ಪೊಲೀಸರು 6 ಗೋವುಗಳ ರಕ್ಷಣೆ ಮಾಡಿದ್ದಾರೆ. ದಾವಣಗೆರೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಕ್ಯಾಂಟರ್ ಬೆಜ್ಜವಳ್ಳಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನೆಯಲ್ಲಿ ಗಾಯಗೊಂಡ ಕ್ಯಾಂಟರ್ ಚಾಲಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.