ಕ್ಯಾಂಟರ್ ಪಲ್ಟಿ: ಎಂಟು ಜಾನುವಾರು ಸ್ಥಳದಲ್ಲೇ ಸಾವು

ಶಿವಮೊಗ್ಗ: ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಕ್ಯಾಂಟರ್ ಪಲ್ಟಿಯಾಗಿ ಎಂಟು ಎತ್ತು ಹಾಗೂ ಎಮ್ಮೆಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಸಮೀಪ ಇಂದು ಮುಂಜಾನೆ ನಡೆದಿದೆ.

ಅಪಘಾತದ ವೇಳೆ ಸ್ಥಳೀಯರು ಹಾಗೂ ಪೊಲೀಸರು 6 ಗೋವುಗಳ ರಕ್ಷಣೆ ಮಾಡಿದ್ದಾರೆ. ದಾವಣಗೆರೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಕ್ಯಾಂಟರ್ ಬೆಜ್ಜವಳ್ಳಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನೆಯಲ್ಲಿ  ಗಾಯಗೊಂಡ ಕ್ಯಾಂಟರ್ ಚಾಲಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!