ಯಶೋದಾ ಕೇಶವ್ ಮಡಿಲಿಗೆ ವೀರ ರಾಣಿ ಅಬ್ಬಕ್ಕ ಪ್ರಶಸ್ತಿಯ ಗರಿ

ಉಡುಪಿ: ತುಳು ಸಾಹಿತ್ಯದಲ್ಲಿ ಸಲ್ಲಿಸಿದ ಅನನ್ಯ ಸೇವೆಗೆ ಯಶೋದಾ ಕೇಶವ್ ಅವರು ಪ್ರತಿಷ್ಠಿತ ವೀರ ರಾಣಿ ಅಬ್ಬಕ್ಕ ಗೌರವ ಪುರಸ್ಕಾರಕ್ಕೆ ಪಾತ್ರರಾಗಿದ್ದಾರೆ.

ABRSM-KRMSS, ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ (ಮಂಗಳೂರು ವಿಭಾಗ) ಆಯೋಜಿಸಿರುವ “ಅಬ್ಬಕ್ಕ 500 ಪ್ರೇರಣಾದಾಯಿ 100 ಉಪನ್ಯಾಸಗಳ ಸರಣಿ” ಕಾರ್ಯಕ್ರಮದ ಅಂಗವಾಗಿ ಈ ಪುರಸ್ಕಾರವನ್ನು ನೀಡಲಾಗುತ್ತಿದೆ. ಸಮಾಜಮುಖಿ ಕಾರ್ಯಗಳು ಹಾಗೂ ಪರಿಸರ ಸಂರಕ್ಷಣಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಮಹಿಳೆಯರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಯಶೋದಾ ಕೇಶವ್ ಇವರಿಗೆ ತುಳು ಸಾಹಿತ್ಯ ಸಂಘಟನೆಯಲ್ಲಿ ತೊಡಗಿಸಿಕೊಂಡು ಅನನ್ಯ ಸೇವೆ, ಸಾಧನೆಗಾಗಿ ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ. ಇದೇ ಬರುವ ಫೆ.16 ರಂದು ಪುತ್ತೂರು ನೆಹರು ನಗರದ ವಿವೇಕಾನಂದ ಕಾಲೇಜು ಆವರಣದಲ್ಲಿ ನಡೆಯಲಿರುವ ರಾಣಿ ಅಬ್ಬಕ್ಕ 500 ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮದ 100 ನೇ ಸಂಭ್ರಮ ಕಾರ್ಯಕ್ರಮದ ಪ್ರಯುಕ್ತ ನಡೆಯಲಿರುವ ಸಾಧಕ ಮಹಿಳೆಯರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಈ ಗೌರವ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.


Leave a Reply

Your email address will not be published. Required fields are marked *

error: Content is protected !!