ಹೆಬ್ರಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ನರೇಂದ್ರ ಮರಸಣಿಗೆ ಆಯ್ಕೆ

ಹೆಬ್ರಿ, ಫೆ. 12: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೆಬ್ರಿ ತಾಲೂಕು ಘಟಕದ 2025-28ನೇ ಸಾಲಿನ ನೂತನ ಅಧ್ಯಕ್ಷರಾಗಿ ವಿಜಯವಾಣಿ ಪತ್ರಿಕೆಯ ವರದಿಗಾರ ನರೇಂದ್ರ ಎಸ್. ಮರಸಣಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿಯಾಗಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಹೆಬ್ರಿಯ ಹೆಬ್ರಿ ಅನಂತ ಪದ್ಮನಾಭ ಸನ್ನಿಧಿ ಸಭಾಭವನದಲ್ಲಿ ನಡೆದ ಚುನಾವಣೆಯಲ್ಲಿ ಈ ಆಯ್ಕೆ ನಡೆಯಿತು.
ಪ್ರಧಾನ ಕಾರ್ಯದರ್ಶಿಯಾಗಿ ಪ್ರಜಾವಣಿ ಪತ್ರಿಕೆಯ ವರದಿಗಾರ ಸುಕುಮಾರ್ ಮುನಿಯಾಲು, ಕೋಶಾಧಿಕಾರಿಯಾಗಿ ವಿಜಯ ಕರ್ನಾಟಕ ಪತ್ರಿಕೆಯ ವರದಿಗಾರ ಸುಮಲತಾ ಹೆಬ್ಬಾರ್, ಉಪಾಧ್ಯಕ್ಷರಾಗಿ ವಿಜಯವಾಣಿ ಪತ್ರಿಕೆಯ ಕೆ. ಸಂಜೀವ ಆರ್.ಡಿ. ಅವಿರೋಧವಾಗಿ ಆಯ್ಕೆಯಾದರು.
ಅದೇ ರೀತಿ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಉದಯವಾಣಿ ಪತ್ರಿಕೆಯ ವರದಿಗಾರ ಉದಯಕುಮಾರ್ ಶೆಟ್ಚಿ ಹಾಗೂ ಪಬ್ಲಿಕ್ ಆ್ಯಪ್ ವರದಿಗಾರ ಶ್ರೀದತ್ತ ಶೆಟ್ಟಿ ಆಯ್ಕೆಯಾದರು.
ಚುನಾವಣಾ ಪ್ರಕ್ರಿಯೆಯಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸಹಕರಿಸಿದರು.

Leave a Reply

Your email address will not be published. Required fields are marked *

error: Content is protected !!